UN NETWORKS
ಕೊಣಾಜೆ: ಇಂದು ವಿಜ್ಷಾನ ಕ್ಷೇತ್ರವು ಕ್ಷಿಪ್ರಗತಿಯಲ್ಲಿ ಬೆಳವಣಿಗೆಯನ್ನು ಕಾಣುತ್ತಿದ್ದರೂ ಜನರಲ್ಲಿ ವೈಜ್ಞಾನಿಕ ಸ್ವಭಾವಗಳು ಕಡಿಮೆಯಾಗುತ್ತಿದೆ. ಇದಕ್ಕೆ ದೇಶದ ಸಾಂಸ್ಕøತಿಕ ಪ್ರಭಾವಗಳೂ ಕಾರಣವಾಗುತ್ತಿದ್ದು ಈ ನಿಟ್ಟಿನಲ್ಲಿ ನಮ್ಮಲ್ಲಿ ವೈಜ್ಞಾನಿಕ ಸ್ವಭಾವಗಳನ್ನು ಹೆಚ್ಚೆಚ್ಚು ಬೆಳೆಸುವ ಕಾರ್ಯ ಆಗಬೇಕಿದೆ ಎಂದು ಯೋಗಿ ವೆಮನ ವಿಶ್ವವಿದ್ಯಾಲಯದ ಸ್ಥಾಪಕ ಕುಲಪತಿ ಪ್ರೊ.ಅರ್ಜುಲ ರಾಮಚಂದ್ರ ರೆಡ್ಡಿ ಅವರು ಅಭಿಪ್ರಾಯಪಟ್ಟರು.
ಅವರು ಬುಧವಾರ ಮಂಗಳೂರು ವಿಶ್ವವಿದ್ಯಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಕಾರ್ಯಕ್ರಮದಲ್ಲಿ ಭಾರತದಲ್ಲಿ ವಿಜ್ಞಾನ ಮತ್ತು ವೈಜ್ಞಾನಿಕ ಸ್ವಭಾವ’ ಎಂಬ ವಿಷಯದಲ್ಲಿ ಉಪನ್ಯಾಸ ನೀಡಿ ಮಾತನಾಡಿದರು.
ವಿಜ್ಞಾನ ಕ್ಷೇತ್ರಕ್ಕೆ ನೋಬೆಲ್ ಪುರಸ್ಕøತ ಸಿ.ವಿ.ರಾಮನ್ ಅವರು ಕೊಡುಗೆ ಅಪಾರವಾದುದು. ಹಿಂದಿನ ಕಾಲದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತದ ಸಾಧನೆ ಗಣನೀಯ ಅಲ್ಲದಿದ್ದರೂ ಇತ್ತೀಚಿನ ವರ್ಷಗಳಲ್ಲಿ ಭಾರತವು ಈ ಕ್ಷೇತ್ರದಲ್ಲಿ ಮುನ್ನಡೆಯುತ್ತಿದೆ. ವಿದ್ಯಾರ್ಥಿ ಸಮುದಾಯ ಕೂಡಾ ಇಂದು ವಿಜ್ಞಾನ ಕ್ಷೇತ್ರದ ಆಯ್ಕೆಯಲ್ಲಿ ಒಲವು ತೋರಿಸುತ್ತಿದ್ದಾರೆ. ಇದರ ಜೊತೆಗೆ ವೈಜ್ಷಾನಿಕ ಸ್ವಭಾವನ್ನೂ ಬೆಳೆಸಿಕೊಂಡು ನೂತನ ಆವಿಷ್ಕಾರಗಳಿಗೆ ಸಾಕ್ಷಿಯಾಗಬೇಕು ಎಂದು ಹೇಳಿದರು.
ಸಮಾರಂಭದ ಅಧ್ಯಕ್ಷತೆಯನ್ನು ಮಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಕೆ.ಭೈರಪ್ಪ ಅವರು ವಹಿಸಿ ಮಾತನಾಡಿದರು.
ಮಂಗಳೂರು ವಿವಿ ಕುಲಸಚಿವ ಪ್ರೊ.ನಾಗೇಂದ್ರ ಪ್ರಕಾಶ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಕಾರ್ಯಕ್ರಮದ ಸಂಘಟಕರಾದ ಪ್ರೊ.ಭೋಜಪೂಜಾರಿ ಅವರು ವಂದಿಸಿದರು. ಡಾ.ಮೋನಿಕಾ ಅವರು ಕಾರ್ಯಕ್ರಮ ನಿರೂಪಿಸಿದರು.


