UN NETWORKS
ಉಳ್ಳಾಲ: ಪ್ರಾಮಾಣಿಕರಿಗೆ ಸಮಾಜದಲ್ಲಿ ಸದಾ ಗೌರವ ಇರುತ್ತದೆ. ಅದರಲ್ಲೂ ಸರಕಾರಿ ಅಧಿಕಾರಿಗಳು ಪ್ರಾಮಾಣಿಕ ಸೇವೆ ಸಲ್ಲಿಸಿದರೆ ಇಡೀ ಜಗತ್ತೇ ಅವರಿಗೆ ಗೌರವ ಸಲ್ಲಿಸುತ್ತದೆ ಎನ್ನುವುದಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿ ಜ್ಞಾನೇಶ್ ಅವರು ಮಾದರಿ ಎಂದು ಮಂಗಳೂರು ತಾಲೂಕು ಪಂಚಾಯತ್ ಅಧ್ಯಕ್ಷರಾದ ಮೊಹಮ್ಮದ್ ಮೋನು ಅಭಿಪ್ರಾಯಪಟ್ಟರು.
ಈ ಸಂದರ್ಭದಲ್ಲಿ ವಿವಿಧ ಸಂಘಗಳ ವತಿಯಿಂದ ನೂತನ ಕ್ಷೇತ್ರ ಶಿಕ್ಷಣಾಧಿಕಾರಿಗಳನ್ನು ಸ್ವಾಗತಿಸಿ, ವರ್ಗಾವಣೆಗೊಂಡ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಪಿ ಜ್ಞಾನೇಶ್‍ರ್‍ರವನ್ನು ಗೌರವಿಸಲಾಯಿತು. ಮಂಗಳೂರು ದಕ್ಷಿಣ ವಲಯದ ಸರ್ವ ಶಿಕ್ಷಣ ಅಭಿಯಾನದ ಕ್ಷೇತ್ರ ಸಮನ್ವಯ ಅಧಿಕಾರಿ ಗೀತ ಶಾನುಭಾಗ್ ಶಿಕ್ಷಣ ಸಂಯೋಜಕಿ ಹಿಲ್ಡಾ ಕ್ಲಮೇನ್ಸಿಯ ಪಿಂಟೋ, ರಾಧಾಕೃಷ್ಣ ರಾವ್, ಸುರೇಶ್ ರಾವ್, ವೇದಾವತಿ, ಶಕುಂತಲ, ಶೋಬಾರಾವ್ ಉಪಸ್ಥಿತರಿದ್ದರು.
ಕರ್ನಾಟಕ ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯ ಉಪಾಧ್ಯಕ್ಷ ಹಾಗೂ ದ.ಕ. ಜಿಲ್ಲಾಧ್ಯಕ್ಷ ಕೆ ಎಂ ಕೆ ಮಂಜನಾಡಿ, ಅಭಿನಂದನ ಭಾಷಣ ಮಾಡಿದರು. ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಮಂಗಳೂರು ದಕ್ಷಿಣ ವಲಯದ ಅಧ್ಯಕ್ಷ ಜಗದೀಶ್ ಶೆಟ್ಟಿ ಸ್ವಾಗತಿಸಿದರು. ಅನುದಾನಿತ ಶಾಲಾ ಶಿಕ್ಷಕರ ಸಂಘದ ಮಂಗಳೂರು ದಕ್ಷಿಣ ವಲಯದ ಅಧ್ಯಕ್ಷ ಎಂ. ಹೆಚ್ ಮಲಾರ್ ಕಾರ್ಯಕ್ರಮ ನಿರೂಪಿಸಿದರು. ಮಂಗಳೂರು ದಕ್ಷಿಣ ವಲಯದ ಪ್ರೌಢ ಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ ವಂದಿಸಿದರು.