UN NETWORKS
ಉಳ್ಳಾಲ: ಸಿದ್ಧರಾಮಯ್ಯ ನೇತೃತ್ವದ ಸರಕಾರದ ಅಲ್ಪಸಂಖ್ಯಾತ ತುಷ್ಟೀಕರಣ ನೀತಿ, ಯೋಜನೆಯಲ್ಲಿ ಜಾತಿ ತಾರತಮ್ಯ, ಹಿಂದೂ ವಿರೋಧಿ ನೀತಿಗಳು ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ಸನ್ನು ಜನ ತಿರಸ್ಕರಿಸಲಿದ್ದಾರೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಅವರು ಮಂಗಳೂರು ಮಂಡಲದ , ನವಶಕ್ತಿ ಕಾರ್ಯಕರ್ತರ ಸಮಾವೇಶವನ್ನು ಬೋಳಿಯಾರ್ ಹಾಲ್ ನಲ್ಲಿ ಶುಕ್ರವಾರ ಉದ್ಘಾಟಿಸಿ ಮಾತನಾಡಿದರು. ಮಂಗಳೂರು ಮಂಡಲದಲ್ಲಿ ಮುಂದಿನ ಚುನಾವಣೆಯಲ್ಲಿ ಬಿಜೆಪಿ ಜಯಗಳಿಸುವುದು ಶತಸಿದ್ಧ. ಆದರೆ ಗೆಲುವು ವ್ಯಕ್ತಿಯದ್ದಲ್ಲ, ಕಮಲದ ಗೆಲುವು. ನವಶಕ್ತಿ ಕಾರ್ಯಕರ್ತರ ಕಾರ್ಯದಿಂದ ಪ್ರತಿ ಮತಗಟ್ಟೆಯಲ್ಲಿ ಗೆಲುವು ಸಾಧಿಸಿ, ಪಕ್ಷ ವಿಜಯದ ಕಡೆಗೆ ಹೆಜ್ಜೆ ಯಿಡಲಿದೆ. ಪ್ರಧಾನಿಯಾಗಿ ನರೇಂದ್ರ ಮೋದಿಯವರ ವ್ಯಕ್ತಿತ್ವ, ಅಭಿವೃದ್ಧಿ ಪರಿಕಲ್ಪನೆ ಮತ್ತು ಅವರ ಸಾಕಾರವನ್ನು ಜನ ಮೆಚ್ಚಿದ್ದಾರೆ. ರಾಜ್ಯದಲ್ಲಿ ಹಿಂದೆ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರಕಾರದ ಜನಪರ ಕಾರ್ಯಗಳನ್ನು ಸ್ಮರಿಸಿ ಜನ ಪುರಸ್ಕರಿಸಲಿದ್ದಾರೆ ಎಂದರು.
ಸಮಾವೇಶದ ಅಧ್ಯಕ್ಷತೆಯನ್ನು ಕ್ಷೇತ್ರ ಅಧ್ಯಕ್ಷ ಸಂತೋಷ್ ಕುಮಾರ್ ರೈ ಬೋಳಿಯಾರ್ ವಹಿಸಿದ್ದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ
ಉಮಾನಾಥ ಕೋಟ್ಯಾನ್, ಜಿಲ್ಲಾ ಉಪಾಧ್ಯಕ್ಷರಾದ ರಾಮಚಂದ್ರ ಬೈಕಂಪಾಡಿ, ಜಿಲ್ಲಾ ಉಪಾಧ್ಯಕ್ಷ ಚಂದ್ರಹಾಸ್ ಉಳ್ಳಾಲ್, ನಿತಿನ್ ಕುಮಾರ್, ರಾಜ್ಯ ಕಾರ್ಯಕಾರಿಣಿ ಮಂಡಳಿ ಸದಸ್ಯ ಕೆ.ರವೀಂದ್ರ ಶೆಟ್ಟಿ ಉಳಿದೊಟ್ಟು, ಜಿಲ್ಲಾ ಕಾರ್ಯದರ್ಶಿಗಳಾದ ಸತೀಶ್ ಕುಂಪಲ, ನಮಿತಾ ಶ್ಯಾಂ, ಕ್ಷೇತ್ರ ಪ್ರಧಾನ ಕಾರ್ಯದರ್ಶಿ ಮೋಹನರಾಜ್ ಕೆ.ಆರ್, ಮನೋಜ್ ಆಚಾರ್ಯ ಉಪಸ್ಥಿತರಿದ್ದರು.


