ಉಳ್ಳಾಲ್ ನ್ಯೂಸ್ ನೆಟ್ ವರ್ಕ್
ಮಂಜನಾಡಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮಂಗಳೂರು ಗ್ರಾಮಾಂತರ ಶಿಶು ಅಭಿವೃದ್ಧಿ ಯೋಜನೆ ಮತ್ತು ಜನ ಶಿಕ್ಷಣ ಟ್ರಸ್ಟ್ ಮುಡಿಪು, ಸ್ತ್ರೀಶಕ್ತಿ ಗುಂಪು ಮತ್ತು ಮಾದರಿ ಗ್ರಾಮ ವಿಕಾಸ ಕೇಂದ್ರ ಕಲ್ಕಟ್ಟ ಮಂಜನಾಡಿ ಇದರ ಸಹಭಾಗಿತ್ವದಲ್ಲಿ ಮಾಹಿಳಾ ದಿನಾಚರಣೆ ಕಾರ್ಯಕ್ರಮವು ಕಲ್ಕಟ್ಟ ಹಿರಿಯ ಪ್ರಾಥಮಿಕ ಶಾಲಾ ವಠಾರದಲ್ಲಿ ನಡೆಯಿತು.
ಜನ ಶಿಕ್ಷಣ ಟ್ರಸ್ಟ್ ಮುಡಿಪು ಇದರ ನಿರ್ದೇಶಕ ಶಿವ ಶೆಟ್ಟಿ ಆಧ್ಯಕ್ಷತೆ ವಹಿಸಿ ಮಾತನಾಡಿದರು.

ಕೃಷ್ಣ ಮೂಲ್ಯ, ಮಂಜನಾಡಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪರಮೇಶ್ವರ್ ಭಂಡಾರಿ, ಮಂಜನಾಡಿ ಗ್ರಾಮ ಪಂಚಾಯತ್ ಸದಸ್ಯ ಅಹ್ಮದ್ ಕುಂಞ ನೆಕ್ಕರೆ, ಮಂಜನಾಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಎ.ಎಂ ಕುಂಞಬಾವ ಹಾಜಿ, ಮಂಜನಾಡಿ ಗ್ರಾಮ ಪಂಚಾಯತ್ ಸದಸ್ಯ ಅಬ್ದುಲ್ ಖಾದರ್, ಚಂಚಲ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು.
ಕಲ್ಕಟ್ಟ ಅಂಗನವಾಡಿ ಕಾರ್ಯಕರ್ತೆ ಸುಜಾತ ಸ್ವಾಗತಿಸಿ ಮಂಗಳೂರು ಗ್ರಾಮಾಂತರ ಶಿಶು ಅಭಿವೃದ್ಧಿ ಯೋಜನೆ ಮೇಲ್ವಿಚರಾಕಿ ಪೂರ್ಣಿಮಾ ವಂದಿಸಿದರು.





