UN NETWORKS
ಮಂಗಳೂರು: ಮಂಗಳೂರು ವಿಶ್ವವಿದ್ಯಾಲಯದ ಡಾ.ಪಿ.ದಯಾನಂದ ಪೈ ಮತ್ತು ಶ್ರೀ ಪಿ.ಸತೀಶ್ ಪೈ ಯಕ್ಷಗಾನ ಅಧ್ಯಯನ ಕೇಂದ್ರದ ಯಕ್ಷಮಂಗಳ ತಂಡದ ವಿದ್ಯಾರ್ಥಿಗಳಿಂದ ಇಂದ್ರಜಿತು ಕಾಳಗ ಹಾಗೂ ಯಕ್ಷಮಂಗಳ ಹಿರಿಯ ವಿದ್ಯಾರ್ಥಿಗಳಿಂದ ತರಣಿಸೇನ ಯಕ್ಷಗಾನ ಪ್ರದರ್ಶನವು ಬಿಕರ್ಣಕಟ್ಟೆಯಲ್ಲಿ ಭಾನುವಾರ ನಡೆಯಿತು.
ಬಿಕರ್ಣಕಟ್ಟೆಯಲ್ಲಿ ಶ್ರೀ ಬಲಮುರಿ ಗಣಪತಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಅಂಗವಾಗಿ ಯಕ್ಷಗಾನ ಪ್ರದರ್ಶನವನ್ನು ಏರ್ಪಡಿಸಲಾಗಿತ್ತು. ಉಪನ್ಯಾಸಕ ಸದಾಶಿವ ಶೆಟ್ಟಿಗಾರ್ ಕಿನ್ನಿಗೋಳಿ ಅವರು ನಿರ್ದೇಶನ ನೀಡಿದ್ದರು. ಕಾರ್ಯಕ್ರಮದಲ್ಲಿ ಯಕ್ಷಗಾನ ಕೇಂದ್ರದ ಪರವಾಗಿ ಸಂಯೋಜಕರಾದ ಡಾ.ಧನಂಜಯ ಕುಂಬ್ಳೆ ಅವರನ್ನು ಬ್ರಹ್ಮಕಲಶೋತ್ಸವ ಸಮಿತಿ ವತಿಯಿಂದ ಗೌರವಿಸಲಾಯಿತು.


