UN NETWORKS
ತೌಡುಗೋಳಿ: ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ತೌಡುಗೋಳಿ ಕ್ರಾಸ್ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ತೌಡುಗೋಳಿಯ ಹಫೀಝ್(32) ಎಂದು ಗುರುತಿಸಲಾಗಿದೆ. ಈತ ಗಾಂಜಾ ಮಾರಾಟ ಮಾಡುತ್ತಿದ್ದಾನೆ ಎಂಬ ಖಚಿತ ಮಾಹಿತಿ ಪಡೆದ ರೌಡಿ ನಿಗ್ರಹದಳ ಸಿಬ್ಬಂದಿಗಳು ಹಾಗೂ ಕೊಣಾಜೆ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ಆತನಿಂದ ಸುಮಾರು 1.350 ಕೆ.ಜಿ ಗಾಂಜಾ ಮತ್ತು 2,500 ರೂ ನಗದು ಸ್ವಾಧೀನಪಡಿಸಿಕೊಂಡಿದ್ದಾರೆ.
ಈತನ ಮೇಲೆ ಮಂಗಳೂರು ದಕ್ಷಿಣ ಪೊಲೀಸ್ ಠಾಣೆ, ಕರಾವಳಿ ಕಾವಲುಪಡೆ ಠಾಣೆ, ಕೊಣಾಜೆ ಮತ್ತು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಈ ಹಿಂದೆ ಗಾಂಜಾ ಮಾರಾಟದ ಬಗ್ಗೆ ಪ್ರಕರಣ ದಾಖಲಾಗಿದ್ದು ಈತ ಕಳೆದ ಒಂದುವರೇ ತಿಂಗಳ ಹಿಂದೆಯಷ್ಟೇ ಜಾಮೀನಿನ ಮೇಲೆ ಹೊರಬಂದಿದ್ದ. ಪ್ರಸಕ್ತ ಈತನ ಮೇಲೆ ಉಳ್ಳಾಲ ಠಾಣೆಯ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ಕಾರಣ ನ್ಯಾಯಾಲಯ ವಾರಂಟ್ ಹೊರಡಿಸಿತ್ತು


