UN NETWORKS
ಉಳ್ಳಾಲ: ಮಂಗಳೂರು ವಿಧಾನ ಸಭಾ ಕ್ಷೇತ್ರದಲ್ಲಿ ಮುಂಬರುವ ಚುನಾವಣೆಯಲ್ಲಿ ಬಿ.ಜೆ.ಪಿ ವಿಜಯ ಸಾಧಿಸುವುದು ಖಂಡಿತ,ಈ ನಿಟ್ಟಿನಲ್ಲಿ ಪ್ರತಿಯೊಬ್ಬರು ಶಕ್ತಿ ಮೀರಿ ಕಾರ್ಯ ನಿರ್ವಹಿಸುವುದು ಅತೀ ಅಗತ್ಯ ಎಂದು ಕೇರಳ ರಾಜ್ಯ ಪ್ರಧಾನ ಕಾರ್ಯದರ್ಶಿ ಸುರೇಂದ್ರನ್ ಅಭಿಪ್ರಾಯಪಟ್ಟರು.
ಅವರು ಮಂಗಳೂರು ಕ್ಷೇತ್ರ ಬಿ.ಜೆ.ಪಿ ಕಛೇರಿಯಲ್ಲಿ ಪ್ರಮುಖ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.
ಪ್ರಧಾನಿಯವರ ನಿಸ್ವಾರ್ಥ ಸೇವೆ ಹಾಗೂ ಅಭಿವೃದ್ಧಿ ಪರ ಯೋಜನೆಗಳನ್ನು ಜನ ಪುರಸ್ಕರಿಸಲಿದ್ದಾರೆ. ಈ ಮೂಲಕ ಮಂಗಳೂರು ಕ್ಷೇತ್ರವನ್ನು ಕಾಂಗ್ರೆಸ್ ಮುಕ್ತ ಮಾಡುವುದರ ಜೊತೆಗೆ ಕರ್ನಾಟಕ ಕಾಂಗ್ರೇಸ್ ಮುಕ್ತವಾಗಬೇಕೆಂದು ಎಂದರು.
ಈ ಸಂದರ್ಭದಲ್ಲಿ ಮಂಗಳೂರು ಕ್ಷೇತ್ರ ಬಿ.ಜೆ.ಪಿ ಅಧ್ಯಕ್ಷ ಸಂತೋಷ್ ಕುಮಾರ್ ರೈ ಬೋಳಿಯಾರ್, ಕೇರಳ ಬಿಜೆಪಿ ಮುಖಂಡ ಹರೀಶ್ಚಂದ್ರನ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಉಮಾನಾಥ ಕೋಟ್ಯಾನ್, ಕ್ಷೇತ್ರ ಪ್ರಭಾರಿ ನಿತಿನ್ ಕುಮಾರ್, ಜಿಲ್ಲಾ ಕಾರ್ಯದರ್ಶಿಗಳಾದ ಸತೀಶ್ ಕುಂಪಲ, ನಮೀತಾ ಶ್ಯಾಮ್, ಕ್ಷೇತ್ರ ಪ್ರಧಾನ ಕಾರ್ಯದರ್ಶಿ ಮೋಹನ್ ರಾಜ್ ಕೆ.ಆರ್, ಮನೋಜ್ ಆಚಾರ್ಯ ಹಾಗೂ ಪ್ರಮುಖರು ಉಪಸ್ಥಿತರಿದ್ಧರು.


