UN NETWORKS
ಕೊಣಾಜೆ : ನೀರು ಒಂದು ಪಾಕೃತಿಕ ಸಂಪತ್ತು ಆಗಿದ್ದು ಇದನ್ನು ಇತಿಮಿತವಾಗಿ ಬಳಸಿ ಸಂರಕ್ಷಿಸಬೇಕಾದದ್ದು ವಿದ್ಯಾರ್ಥಿಗಳ ಕರ್ತವ್ಯ ಎಂದು ಪಿ.ಎ.ಎಜ್ಯುಕೇಶನಲ್ ಟ್ರಸ್ಟ್ ಇದರ ಅಧ್ಯಕ್ಷ ಡಾ| ಪಿ.ಎ.ಇಬ್ರಾಹಿಂ ಅಭಿಪ್ರಾಯಪಟ್ಟರು.
ಪಿ.ಎ. ತಾಂತ್ರಿಕ ಮಹಾವಿದ್ಯಾಲಯದಲ್ಲಿ ವಿಶ್ವ ಜಲ ದಿನಾಚರಣೆ ಅಂಗವಾಗಿ ವಿಶ್ವ ಜಲ ದಿನದ ಭಿತ್ತಿ ಪತ್ರವನ್ನು ಬಿಡುಗಡೆ ಮಾಡುವ ಮೂಲಕ ವಿಶ್ವಜಲ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಈ ಕಾರ್ಯಕ್ರಮದಲ್ಲಿ ಪಿ.ಎ.ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ| ಅಬ್ದುಲ್ ಶರೀಫ್, ಶೈಕ್ಷಣಿಕ ನಿರ್ದೇಶಕ ಪ್ರೊ| ಸರ್ಫರಾಜ್ ಹಾಶೀಮ್ ಜೆ., ಎಂ.ಬಿ.ಎ.ವಿಭಾಗದ ಮುಖ್ಯಸ್ಥ ಡಾ| ಬೀರಾನ್ ಮೊೈದೀನ್, ಎಲೆಕ್ಟ್ರಾನಿಕ್ಸ್ ಎಂಡ್ ಕಮ್ಯೂನಿಕೇಷನ್ ವಿಭಾಗದ ಮುಖ್ಯಸ್ಥ ಡಾ| ಅಬ್ದುಲ್ ರಹಿಮಾನ್, ರಾಷ್ಟ್ರೀಯ ಸೇವಾ ಯೋಜನಾ ಘಟಕ ನಾಯಕ ಮೊಹಮ್ಮದ್ ಸಫೀರ್ ಹಾಗೂ ಸ್ವಯಂ ಸೇವಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.


