Site icon Ullalavani

ಗೋರಕ್ಷಣೆಗಾಗಿ ಸೋಮೇಶ್ವರದಲ್ಲಿ ಪೂಜೆ

UN NETWORKS

ಸೋಮೇಶ್ವರ: ಜಿಲ್ಲೆಯಲ್ಲಿ ಗೋಕಳ್ಳತನ ಸಂಪೂರ್ಣವಾಗಿ ನಿಲ್ಲಬೇಕು ಮತ್ತು ಅಮೃತಧಾರ ಗೋಶಾಲೆಯ ಗೋಕಳವು ಮಾಡಿದ ಗೋಕಳ್ಳರಿಗೆ ಕಠಿಣ ಶಿಕ್ಷೆಯಾಗಬೇಕು ನಾಡಿನಾದ್ಯಂತ ಗೋಸಂರಕ್ಷಣೆಯಾಗಬೇಕು ಈ ನಿಟ್ಟಿನಲ್ಲಿ ವಿಶ್ವಹಿಂದೂ ಪರಿಷತ್ ಮತ್ತು ಸಹ ಸಂಘಟನೆಗಳ ಸಹಯೋಗದೊಂದಿಗೆ ಸಾಮೂಹಿಕ ಪ್ರಾರ್ಥನೆಯನ್ನು ಉಳ್ಳಾಲ ವ್ಯಾಪ್ತಿಯ ಎಲ್ಲಾ ದೇವಸ್ಥಾನಗಳ ದೈವಸ್ಥಾನ ಮತ್ತು ಮಂದಿರಗಳಲ್ಲಿ ಯಶಸ್ವಿಯಾಗಿ ನಡೆಸಿದೆ ಎಂದು ವಿಶ್ವಹಿಂದೂ ಪರಿಷತ್‍ನ ವಿಭಾಗೀಯ ಕಾರ್ಯದರ್ಶಿ ಶರಣ್ ಪಂಪ್‍ವೆಲ್ ತಿಳಿಸಿದರು.

?

ಪುಣ್ಯಕೋಟಿ ಅಮೃತಾಗೋಶಾಲೆಯ ಗೋಕಳ್ಳತನಕ್ಕೆ ಸಂಬಂಧಿಸಿದಂತೆ ಕಳೆದ ಆರು ದಿನಗಳಿಂದ ನಡೆಯುತ್ತಿರುವ ಅಮರಣಾಂತ ಉಪವಾಸ ಸತ್ಯಾಗ್ರಹ ಮತ್ತು ನಾಡಿನಾದ್ಯಂತ ಗೋರಕ್ಷಣೆಗಾಗಿ ಶುಕ್ರವಾರ ಉಳ್ಳಾಲದಾದ್ಯಂತ ನಡೆದ ಸಾಮೂಹಿಕ ಪ್ರಾರ್ಥನೆಯ ಅಂಗವಾಗಿ ಸೋಮೇಶ್ವರ ಶ್ರಿ ಸೋಮನಾಥ ದೇವಸ್ಥಾನದಲ್ಲಿ ನಡೆದ ಸಾಮೂಹಿಕ ಪ್ರಾರ್ಥನೆಯ ಬಳಿಕ ಮಾತನಾಡಿದರು.

ಜಿಲ್ಲಾ ಕಾರ್ಯಾಧ್ಯಕ್ಷ ಗೋಪಾಲ ಕುತ್ತಾರ್ ಮಾತನಾಡಿ ಅಮೃತಧಾರ ಗೋಶಾಲೆಯಲ್ಲಿ ಕಳವು ನಡೆಸಿ ಎಂಟು ದಿನಗಳಾದರೂ ದನವನ್ನು ಕಡಿದವರನ್ನು ಹಿಡಿದಿರುವ ಪೊಲೀಸರು ಕಳ್ಳರನ್ನು ಬಂಧಿಸಲು ಸಾಧ್ಯವಾಗಿಲ್ಲ. ಗೋಕಳ್ಳರನ್ನು ಬಂಧಿಸಿ ಉಪವಾಸ ಸತ್ಯಾಗ್ರಹ ಮಾಡುತ್ತಿರುವ ಟಿ.ಜಿ. ರಾಜಾರಾ ಭಟ್ ಅವರಿಗೆ ನ್ಯಾಯವನ್ನು ಒದಗಿಸಿಕೊಡಬೇಕು ಈ ನಿಟ್ಟಿನಲ್ಲಿ ಗೋಸಂರಕ್ಷಣೆಯ ನಿಟ್ಟಿನಲ್ಲಿ ದೇವರಲ್ಲಿ ಶಕ್ತಿ ಕೊಡುವಂತೆ ಸಾಮೂಹಿ ಪ್ರಾರ್ಥನೆಯನ್ನು ಕೈಗೊಂಡಿದೆ ಎಂದರು.

ಈ ಸಂದರ್ಭದಲ್ಲಿ ಉಳ್ಳಾಲ ವ್ಯಾಪ್ತಿಯ 27 ಗ್ರಾಮಗಳ ವಿವಿಧ ದೇವಸ್ಥಾನ, ದೈವಸ್ಥಾನಗಳಲ್ಲಿ ಸಾಮೂಹಿಕ ಪ್ರಾರ್ಥನೆ ನಡೆಯಿತು.
ಉಳ್ಳಾಲ ಪ್ರಖಂಡ ಕಾರ್ಯದರ್ಶಿ ರವಿ ಅಸೈಗೋಳಿ, ಪ್ರಮೋದ್, ಶೈಲು ಅಡ್ಕ, ಶಿವ ಪ್ರಸಾದ್ ಅಂಬ್ಲಮೊಗರು, ಪ್ರದೀಪ್ ಕೆರೆಬೈಲ್‍ಗುಡ್ಡೆ ಮತ್ತಿತರರು ಉಪಸ್ಥಿತರಿದ್ದರು.

Exit mobile version