UN NETWORKS
ಮುಡಿಪು : ಮನೆಗೆ ನುಗ್ಗಿದ ನಾಲ್ವರು ಕಳ್ಳರ ತಂಡದಲ್ಲಿ ಓರ್ವನನ್ನು ಬೋಳಿಯಾರು ನಾಗರಿಕರು ರೆಡ್ ಹ್ಯಾಂಡಾಗಿ ಹಿಡಿದು ಕೊಣಾಜೆ ಪೊಲೀಸರಿಗೆ ಒಪ್ಪಿಸಿದ್ದಾರೆ.
ಮತ್ತೆ ಅಲ್ಪ ದೂರದಲ್ಲಿ ಇನ್ನೊಂದು ಮನೆಗೆ ನುಗ್ಗಲು ಯತ್ನಿಸುವ ಸಂದರ್ಭ, ಸ್ಥಳೀಯರು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿ ನಾಲ್ವರಲ್ಲಿ ಓರ್ವನನ್ನು ಹಿಡಿದಿದ್ದಾರೆ. ಹೆಚ್ಚಿನ ವಿಚಾರಣೆಗೆ ಕೊಣಾಜೆ ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ. ಉಳಿದ ಮೂವರನ್ನು ತಮಿಳುನಾಡು ಮೂಲದವರೇ ಆಗಿರಬಹುದೆಂದು ಸಂಶಯಿಸಲಾಗಿದ್ದು, ಅವರಿಗಾಗಿ ಕೊಣಾಜೆ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ.