UN NETWORKS
ಕೊಣಾಜೆ: ಸಂವಿದಾನ ಶಿಲ್ಪಿ ಅಂಬೇಡ್ಕರ್ ಅವರು ಕೇವಲ ಒಂದು ಸಮುದಾಯಕ್ಕೆ ಮಾತ್ರ ಸೀಮಿತವಾದ ನಾಯಕರಾಗದೆ ಅವರು ಇಡೀ ಜಗತ್ತಿನ ಮಹಾನ್ ನಾಯಕರಾಗಿದ್ದಾರೆ.
ಅವರು ಮಂಗಳೂರು ವಿಶ್ವವಿದ್ಯಾಲಯದ ಡಾ.ಬಿ.ಆರ್.ಅಂಬೇಡ್ಕರ್ ಅಧ್ಯಯನ ಕೇಂದ್ರ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಘಟಕದ ಆಶ್ರಯದಲ್ಲಿ ಮಂಗಳೂರು ವಿವಿಯ ಮಂಗಳಾ ಸಭಾಂಗಣದಲ್ಲಿ ನಡೆದ ಡಾ.ಬಿ.ಆರ್.ಅಂಬೇಡ್ಕರ್‍ರವರ 127ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.
ಇತರ ದೇಶಗಳ ಸಂವಿಧಾನವನ್ನು ಹೋಲಿಸಿದರೆ ಭಾರತದ ಸಂವಿಧಾನವು ಅತ್ಯಂತ ಪ್ರಮುಖವಾಗಿ ನಮಗೆ ಕಾಣುತ್ತದೆ. ಇಂದಿಗೂ ಮೂಲ ಸ್ವರೂಪ ಹಾಗೂ ಸತ್ಯತೆಯನ್ನು ಉಳಿಸಿಕೊಂಡು ಬಂದಿದೆ. ಅಸಮಾನತೆ, ಜಾತೀಯತೆಯನ್ನು ಹೋಗಲಾಡಿಸಿ ಆಧುನಿಕ ಭಾರತದ ನಿರ್ಮಾಣ ಮಾಡಿದ ಡಾ.ಅಂಬೇಡ್ಕರ್ ಅವರ ಆಶಯವನ್ನು ಈಡೇರಿಸುವ ಪ್ರಯತ್ನ ಮಾಡಬೇಕಿದೆ ಎಂದು ಹೇಳಿದರು.
ಕರ್ನಾಟಕ ಸರಕಾರದ ಹೆಚ್ಚುವರಿ ಅಡ್ವಕೇಟ್ ಜನರಲ್ ಡಾ.ಆದಿತ್ಯ ಸೋಂಧಿ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ, ಅಂಬೇಡ್ಕರ್ ಅವರ ಕನಸನ್ನು ಪೂರ್ಣಗೊಳಿಸಬೇಕಾಗದೆ ಸಂವಿಧಾನದ ಪ್ರತಿಯೊಂದು ಪ್ರತಿಯೊಂದು ಭಾಗದ ವಿಧಿಗಳನ್ನು ನಾವು ತಿಳಿದುಕೊಳ್ಳಬೇಕಾಗುತ್ತದೆ. ಅಲ್ಲದೆ ರಾಜಕೀಯ, ಆರ್ಥಿಕ, ಸಾಮಾಜಿಕ ಸ್ವಾತಂತ್ರಗಳು ಪ್ರತಿಯೊಬ್ಬರಿಗೂ ಸಿಗುವಂತಾಗಲೂ ನಾವೆಲ್ಲರು ಪ್ರಾಮಾಣಿಕವಾಗಿ ಪ್ರಯತ್ನಿಸಬೇಕಾಗಿದೆ ಎಂದರು.
ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಕೆ.ಭೈರಪ್ಪ ಅವರು, ಡಾ.ಬಿ.ಆರ್.ಅಂಬೇಡ್ಕರ್ ಅವರು ಸಂವಿಧಾನ ಶಿಲ್ಪಿ ಮಾತ್ರವಲ್ಲ ನವಭಾರತದ ನಿರ್ಮಾಣದಲ್ಲಿ ಅವರ ಪಾತ್ರ ಪ್ರಮುಖವಾದುದು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಮಂಗಳೂರು ವಿವಿ ಕುಲಸಚಿವ ಪ್ರೊ.ನಾಗೇಂದ್ರ ಪ್ರಕಾಶ್, ಡಾ.ಬಿ.ಆರ್.ಅಂಬೇಡ್ಕರ್ ಅಧ್ಯಯನ ಕೇಂದ್ರದ ನಿರ್ದೇಶಕ ಪ್ರೊ.ವಿಶ್ವನಾಥ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಘಟಕದ ವಿಶೇಷ ಅಧಿಕಾರಿ ಸಬಿತ ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.