Site icon Ullalavani

ದೇರಳಕಟ್ಟೆ ಎನ್‍ಐಪಿಟಿ ಕ್ಯಾಂಪಸ್‍ನಲ್ಲಿ “ಸ್ವಚ್ಛತಾ ಜಾಗೃತಿ ಕಾರ್ಯಕ್ರಮ”

UN NETWORKS

ದೇರಳಕಟ್ಟೆ : ರಾಮಕೃಷ್ಣ ಮಿಷನ್ ಸಹಯೋಗದೊಂದಿಗೆ ನಿಟ್ಟೆ ಇನ್‍ಸ್ಟಿಟ್ಯೂಟ್ ಆಫ್ ಫಿಸಿಯೋಥೆರಪಿ ಇದರ ಆಶ್ರಯದಲ್ಲಿ “ಸ್ವಚ್ಛತಾ ಜಾಗೃತಿ ಕಾರ್ಯಕ್ರಮ” ಎನ್‍ಐಪಿಟಿ ಕ್ಯಾಂಪಸ್‍ನಲ್ಲಿ ನಡೆಯಿತು.

ನಿಟ್ಟೆ ವಿಶ್ವವಿದ್ಯಾನಿಲಯದ ಕುಲಸಚಿವೆ ಅಲ್ಕಾ ಕುಲಕರ್ಣಿ ಮಾತನಾಡಿ ವಿದ್ಯಾರ್ಥಿಗಳು ಸ್ವಚ್ಛತಾ ಕಾರ್ಯದ ಮೂಲಕ ಸಾಮಾಜಿಕವಾಗಿ ತೊಡಗಿಸಿಕೊಳ್ಳುವ ಕಾರ್ಯ ಶ್ಲಾಘನೀಯವಾಗಿದ್ದು, ಕಾಲೇಜಿನ ಮುಖ್ಯಸ್ಥರ ಮತ್ತು ರಾಮಕೃಷ್ಣ ಮಿಷನ್ ಸಹಯೋಗದೊಂದಿಗೆ ಕಾರ್ಯಕ್ರಮ ಯಶಸ್ವಿಯಾಗಲಿ ಎಂದರು.

ಕಾರ್ಯಕ್ರಮದಲ್ಲಿ ಸ್ವಚ್ಛ ಭಾರತ್ ಕಾರ್ಯಕ್ರಮದಡಿ ಪ್ರಸಿದ್ಧಿಯನ್ನು ಪಡೆದಿರುವ ಪ್ರದಾನಿಯವರ ಮನ್ ಕಿ ಬಾತ್ ಕಾರ್ಯಕ್ರಮದ ಮೂಲಕ ಪ್ರಸಿದ್ಧಿಯನ್ನು ಪಡೆದಿರುವ ಪುಣೆಯ ಪಿಂಪ್ರಿಯ ನಿವೃತ್ತ ಶಿಕ್ಷಕ ಚಂದ್ರಕಾಂತ್ ಕುಲಕರ್ಣಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ವಿದ್ಯಾರ್ಥಿನಿಯರು ಕಾಲೇಜು ಕ್ಯಾಂಪಸ್ ಸೇರಿದಂತೆ ವಸತಿ ನಿಲಯಗಳಿಗೆ ತೆರಳಿ ಸ್ವಚ್ಛತಾ ಕಾರ್ಯದ ಕೈಪಿಡಿಯ ಮೂಲಕ ಮಾಹಿತಿ ನೀಡುವ ಕಾರ್ಯವನ್ನು ನಡೆಸಿದರು.

ಫಿಸಿಯೋಥೆರಪಿ ಕಾಲೇಜಿನ ಪ್ರಾಂಶುಪಾಲ ಡಾ| ದಿನೇಶ್ ಕುಮಾರ್ ಕೆ.ಯು. ಸ್ವಾಗತಿಸಿದರು ಸಹ ಪ್ರಾಧ್ಯಾಪಕ ರಾಕೇಶ್ ಕೃಷ್ಣ ಕಾರ್ಯಕ್ರಮ ಸಂಯೋಜಿಸಿದ್ದರು. ಸಹ ಪ್ರಾಧ್ಯಾಪಕ ಡಾ| ಪುರುಷೋತ್ತಮ್ ವಂದಿಸಿದರು.

Exit mobile version