ದೇರಳಕಟ್ಟೆ: ಯೆನೆಪೋಯ ವಿಶ್ವವಿದ್ಯಾನಿಲಯದ ಪರಿಸರ ಅಧ್ಯಯನ ಕೇಂದ್ರದ ಆಶ್ರಯದಲ್ಲಿ ವಿಶ್ವ ಭೂ ದಿನಾಚರಣೆ ಕ್ಯಾಂಪಸ್‍ನಲ್ಲಿ ನಡೆಯಿತು.
ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳಿಗೆ ಎರೆಗೊಬ್ಬರ ತಯಾರಿಕೆಯ ತರಬೇತಿಯನ್ನು ನೀಡುವುದರ ಮೂಲಕ ಭೂಮಿಯನ್ನು ಮಲಿನ ಗೊಳಿಸುತ್ತಿರುವ ಘನ ತ್ಯಾಜ್ಯ ನಿರ್ವಹಣೆಯನ್ನು ಸೂಕ್ತವಾಗಿ ನಿರ್ವಹಿಸುವ ಬಗ್ಗೆ ಮಾಹಿತಿಯನ್ನು ಪರಿಸರ ಅಧ್ಯಯನ ಕೇಂದ್ರದ ಸಹಾಯಕ ನಿರ್ದೇಶಕಿ ಡಾ| ಭಾಗ್ಯ ಬಿ. ಶರ್ಮ ನೀಡಿ ದಿನದ ಮಹತ್ವವನ್ನು ತಿಳಿಸಿ ಪ್ರಾಕೃತಿಕ ಸಂಪನ್ಮೂಲಗಳನ್ನು ಸಂರಕ್ಷಿಸುವ ಬಗ್ಗೆ ವಿದ್ಯಾರ್ಥಿಗಳಿಂದ ಪ್ರತಿಜ್ಞೆಯನ್ನು ಮಾಡಿಸಿದರು.
ಫಾರ್ಮಸಿ ಕಾಲೇಜಿನ 55 ವಿದ್ಯಾರ್ಥಿಗಳು ಎರೆಗೊಬ್ಬರ ತಯಾರಿಕೆಯ ತರಬೇತಿಯಲ್ಲಿ ಪಾಲ್ಗೊಂಡಿದ್ದರು. ಯೆನೆಪೋಯ ಫಾರ್ಮಸಿ ಕಾಲೇಜಿನ ಪ್ರಾಂಶುಪಾಲ ಪ್ರೊ| ಮೊಹಮ್ಮದ್ ಗುಲ್ಜಾರ್ ಅಹಮದ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.