UN NETWORKS
ತೊಕ್ಕೊಟ್ಟು: ಟಿಪ್ಪರ್ ಲಾರಿ ಡಿಕ್ಕಿ ಹೊಡೆದು ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ತೊಕ್ಕೊಟ್ಟು ಬಸ್ಸು ನಿಲ್ದಾಣದ ಬಳಿ ಶುಕ್ರವಾರ ಮಧ್ಯಾಹ್ನ ವೇಳೆ ಸಂಭವಿಸಿದೆ.
ಕುಂಪಲ ಆಶ್ರಯ ಕಾಲನಿ ನಿವಾಸಿ ವಿನೀತ್ ರಾಜ್ (25) ಮೃತರು. ಮಂಗಳೂರಿನ ಬಂದರಿನ ಹಾರ್ಡ್‍ವೇರ್ ಅಂಗಡಿಯಲ್ಲಿ ಕೆಲಸಕ್ಕಿದ್ದ ವಿನೀತ್ ದೇರಳಕಟ್ಟೆ ಕಡೆಯಿಂದ ಮಂಗಳೂರಿಗೆ ತೆರಳುವ ಸಂದರ್ಭ ತೊಕ್ಕೊಟ್ಟು ರಾ.ಹೆ 66 ತಿರುವಿನಲ್ಲಿ ಟಿಪ್ಪರ್ ಲಾರಿ ಎದುರಿನಿಂದ ಢಿಕ್ಕಿ ಹೊಡೆದಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡ ವಿನೀತ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಅವಿವಾಹಿತರಾಗಿರುವ ವಿನೀತ್ ರಾಜ್ ಇಬ್ಬರು ಸಹೋದರರು ಹಾಗೂ ಓರ್ವ ಸಹೋದರಿ ಹಾಗೂ ತಂದೆ ಮತ್ತು ತಾಯಿಯನ್ನು ಅಗಲಿದ್ದಾರೆ. ಮಂಗಳೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


