UN NETWORKS
ಮಂಗಳೂರು : ಮಂಗಳೂರು ತಾಲೂಕಿನ ಗುರುಕಂಬಳದ ಎ.ಕೆ.ಯು ಅನುದಾನಿತ ಪ್ರೌಢಶಾಲೆಯಲ್ಲಿ ಸುಮಾರು 33 ವರ್ಷಗಳ ಕಾಲ ದೈಹಿಕ ಶಿಕ್ಷಣ ಶಿಕ್ಷಕರಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಅಬ್ದುಲ್ ರಹಿಮಾನ್ ಅವರ ವಿದಾಯ ಸನ್ಮಾನ ಸಮಾರಂಭವು ಇತ್ತೀಚೆಗೆ ಶಾಲಾ ಸಭಾಂಗಣದಲ್ಲಿ ನಡೆಯಿತು.
ಮುಖ್ಯ ಅತಿಥಿಯಾಗಿ ಮಂಗಳೂರು ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಸಂಘದ ಅಧ್ಯಕ್ಷರಾದ ತ್ಯಾಗಂ ಹರೇಕಳ ಇವರು ತನ್ನ ಅಭಿನಂದನಾ ಭಾಷಣದಲ್ಲಿ ಅಬ್ದುಲ್ ರಹಿಮಾನ್‍ರವರು ತಮ್ಮ ಸೇವಾ ಅವಧಿಯಲ್ಲಿ ಹಲವಾರು ವಿದ್ಯಾರ್ಥಿಗಳನ್ನು ರಾಜ್ಯಮಟ್ಟಕ್ಕೆ ಕಳಿಸಿ ಕೊಡುವುದರೊಂದಿಗೆ ಅಲ್ಲಿಯೂ ಉತ್ತಮ ಸಾಧನೆಯನ್ನು ಮಾಡುವಲ್ಲಿ ಪ್ರೇರಣೆಯನ್ನು ತರಬೇತಿಯನ್ನು ನೀಡಿದವರು.
ಅದರೊಂದಿಗೆ ರಾಜ್ಯಮಟ್ಟದ ತೀರ್ಪುಗಾರರು ಹೌದು. ಮಾತ್ರವಲ್ಲದೆ ಹಲವಾರು ಕ್ರೀಡಾಕೂಟಗಳನ್ನು ಯಶಸ್ವಿಯಾಗಿ ಸಂಘಟಿಸುವಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತಿದ್ದರು. ಪ್ರವೃತ್ತಿಯಲ್ಲಿಯೂ ವಿದ್ಯಾರ್ಥಿಗಳಿಗೆ ತಬೇತಿಯನ್ನು ನೀಡಲು ಮುಂದೆ ಬರಬೇಕು ಎಂದು ಹೇಳಿದರು. ಅಧ್ಯಕ್ಷತೆಯನ್ನು ಸಹಾರ ಆಂಗ್ಲ ಮಾಧ್ಯಮ ಶಾಲೆಯ ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಯು.ಪಿ. ಇಬ್ರಾಹಿಂ ಅವರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ನಿವೃತ್ತ ಮುಖ್ಯ ಶಿಕ್ಷಕರಾದ ಓಸ್ವಾಲ್ಡ್ ರೊಡ್ರಿಗಸ್, ಸ್ವಾಮಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಶಾರೀರಿಕ ನಿರ್ದೇಶಕರಾದ ಪ್ರೇಮನಾಥ ಶೆಟ್ಟಿ ಜೈನ್ ಪದವಿ ಪೂರ್ವ ಕಾಲೇಜಿನ ಶಾರೀರಿಕ ನಿರ್ದೇಶಕರಾದ ನವೀನ್ ಹೆಗ್ಡೆ, ಆರ್.ಎಸ್.ಝೂಕೀರ್, ಗಣೇಶ್ ಪೂಜಾರಿ ಮುಂತಾದವರು ಶುಭವನ್ನು ಕೋರಿದರು.
ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಕೋಶಾಧಿಕಾರಿ ಲ್ಯಾನ್ಸೀ ಸಿಕ್ವೇರಾ, ಉಪಾಧ್ಯಕ್ಷರಾದ ಪ್ರಮೋದ್ ಕುಮಾರ್, ಶಾಲಾ ಆಡಳಿತ ಮಂಡಳಿಯ ಕಾರ್ಯದರ್ಶಿ ಉಮ್ಮರ್ ಸಾಹೇಬ್ ಉಪಸ್ಥಿತರಿದ್ದರು. ಹಿರಿಯ ಶಿಕ್ಷಕಿ ಲತಾ ಉಡುಪ ಸನ್ಮಾನ ಪತ್ರ ವಾಚಿಸಿದರು ಮುಖ್ಯೋಪಾಧ್ಯಾಯರಾದ ಅರುಣ್ ಶೆಟ್ಟಿಯವರು ವ್ಯಕ್ತಿ ಪರಿಚಯ ಮಾಡುವುದರೊಂದಿಗೆ ಸರ್ವರನ್ನು ಸ್ವಾಗತಿಸಿದರು. ಶಿಕ್ಷಕಿ ಲಿಲ್ಲಿ ಕ್ರಾಸ್ತಾ ನಿರೂಪಿಸಿದರು.