UN NETWORKS
ಮಂಗಳೂರು: ವಿಶ್ವ ರೆಡ್ ಕ್ರಾಸ್ ದಿನಾಚರಣೆ ಅಂಗವಾಗಿ ನಗರದ ಮೇರಿಹಿಲ್ನಲ್ಲಿರುವ ಗೃಹರಕ್ಷಕ ದಳದ ಕಚೇರಿಯಲ್ಲಿ ಮಂಗಳವಾರ ಗಿಡ ನೆಡುವ ಕಾರ್ಯಕ್ರಮ ಜರುಗಿತು.
“ಮಾನವೀಯತೆಯಿಂದ ಶಾಂತಿಯ ಕಡೆಗೆ” ಎಂಬ ಧ್ಯೇಯ ವಾಕ್ಯ ಹೊಂದಿರುವ ರೆಡ್ಕ್ರಾಸ್ ಸಂಸ್ಥೆ ಜಗತ್ತಿನ ಅತಿ ದೊಡ್ಡ ಸರ್ಕಾರೇತರ ಸ್ವಯಂ ಸೇವಾ ಸಂಸ್ಥೆಯಾಗಿದ್ದು, ಜಾಗತಿಕವಾಗಿ ಲಕ್ಷಾಂತರ ಮಂದಿ ಕಾರ್ಯಕರ್ತರು “ರೆಡ್ಕ್ರಾಸ್ ಸಂಸ್ಥೆ”ಯಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟ ಡಾ. ಮುರಲೀ ಮೋಹನ ಚೂಂತಾರು ಹೇಳಿದರು.
ಉಪಸಮಾದೇಷ್ಟ ಶ್ರೀ ರಮೇಶ್, ಮಂಗಳೂರು ಘಟಕದ ಘಟಕಾಧಿಕಾರಿ ಮಾರ್ಕ್ಶೇರಾ, ಹಿರಿಯ ಗೃಹರಕ್ಷಕ ರಮೇಶ್ ಭಂಡಾರಿ, ರಾಜಶ್ರೀ, ಲೀಲಾ ಕುಕ್ಯಾನ್, ಕೇಶವ ಸೇರಿದಂತೆ 80 ಮಂದಿ ಗೃಹರಕ್ಷಕರು ಉಪಸ್ಥಿತರಿದ್ದರು.


