Site icon Ullalavani

ಮಂಗಳೂರಿನಲ್ಲಿ ಗೆಲುವಿನ ನಗೆ ಬೀರಿದ ಸಚಿವ ಯು.ಟಿ.ಖಾದರ್

UN NETWORKS

ಮಂಗಳೂರು: ಸಿದ್ದರಾಮಯ್ಯ ಸಂಪುಟದಲ್ಲಿ ಆಹಾರ ಹಾಗೂ ನಾಗರೀಕ ಸರಬರಾಜು ಸಚಿವರಾಗಿದ್ದ ಯು.ಟಿ.ಖಾದರ್ ಕರ್ನಾಟಕ ವಿಧಾನಸಭೆ ಚುನಾವಣೆ 2018ರಲ್ಲಿ ಜಯಭೇರಿ ಬಾರಿಸಿದ್ದಾರೆ.

ಹಾಲಿ ಶಾಸಕ ಯು.ಟಿ.ಖಾದರ್ ಕುಟುಂಬ ಮಂಗಳೂರು ಕ್ಷೇತ್ರದಲ್ಲಿ ಪ್ರಭಾವಿತರು. 1972, 1978, 1999 ಹಾಗೂ 2004 ರಲ್ಲಿ ಯು.ಟಿ.ಖಾದರ್ ತಂದೆ ಯು.ಟಿ.ಫರೀದ್ ಗೆಲುವು ಸಾಧಿಸಿದ್ದರು.

ದಕ್ಷಿಣ ಕನ್ನಡ ಜಿಲ್ಲೆಯ 8 ವಿಧಾನ ಸಭಾ ಕ್ಷೇತ್ರಗಳ ಪೈಕಿ ಕುತೂಹಲ ಕೆರಳಿಸಿರುವ ಮಂಗಳೂರು ವಿಧಾನಸಭಾ ಕ್ಷೇತ್ರದಲ್ಲಿ ಸಚಿವ ಯು ಟಿ ಖಾದರ್ ಗೆಲುವು ಸಾಧಿಸಿರುವುದಕ್ಕೆ ಹರ್ಷ ವ್ಯಕ್ತವಾಗುತ್ತಿದೆ. ಸೋಲಿಲ್ಲದ ಸರದಾರ ಎಂದೇ ಖ್ಯಾತಿ ಪಡೆದ ಸಚಿವ ಯು.ಟಿ.ಖಾದರ್ ಈ ಬಾರಿ ಅಧಿಕ ಮತಗಳ ಅಂತರದಿಂದ ಗೆದ್ದು ವಿಜಯದ ನಗೆ ಬೀರಿದ್ದಾರೆ. ಸಚಿವ ಯು ಟಿ ಖಾದರ್ ತಮ್ಮ ಕ್ಷೇತ್ರದ ಎಲ್ಲ ವರ್ಗದ ಜನರ ಅಭಿವೃದ್ಧಿಗೆ ಶಕ್ತಿ ಮೀರಿ ಶ್ರಮಿಸಿದ್ದು, ಅವರ ಅಭಿವೃದ್ಧಿ ಕಾರ್ಯಗಳೇ ಗೆಲುವಿಗೆ ಕಾರಣವಾಗಿದೆ.

ಈ ಬಾರಿ ಸಂತೋಷ್ ರೈ ಬೋಳಿಯಾರ್ ವಿರುದ್ಧ ಕಣಕ್ಕೆ ಇಳಿದಿದ್ದ ಸಚಿವ ಯು.ಟಿ ಖಾದರ್ ಅವರು ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

2013 ರ ಚನಾವಣೆಯಲ್ಲಿ ಈ ಕ್ಷೇತ್ರದಿಂದ ಸ್ಪರ್ಧಿಸಿದ್ದ ಬಿಜೆಪಿ ಅಭ್ಯರ್ಥಿಯ ಎದುರು ಯು. ಟಿ ಖಾದರ್ ಸುಮಾರು 30 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಿದ್ದರು. ಇದೀಗ 2018 ರ ಚುನಾವಣಾ ಫಲಿತಾಂಶವೂ ಕಾಂಗ್ರೆಸ್ ಪರವಾಗಿದೆ.

Exit mobile version