UN NETWORKS
ಬೆಂಗಳೂರು : ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅವರು ಕರ್ನಾಟಕದ 24ನೇ ಮುಖ್ಯಮಂತ್ರಿಯಾಗಿ ಗುರುವಾರ ಬೆಳಗ್ಗೆ 9 ಗಂಟೆಗೆ ಪ್ರಮಾಣ ವಚನ ಸ್ವೀಕರಿಸಿದರು. 2018ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 104 ಸ್ಥಾನಗಳನ್ನು ಪಡೆದು ಜಯಗಳಿಸಿತ್ತು.
ಹಸಿರು ಶಾಲು ಹೊದ್ದು ಮತ್ತೆ ಮುಖ್ಯಮಂತ್ರಿಯಾದ ಯಡಿಯೂರಪ್ಪ ಬಿಳಿಯ ಸಫಾರಿ ಸೂಟು ಧರಿಸಿದ್ದ ಬಿ.ಎಸ್.ಯಡಿಯೂರಪ್ಪ ಅವರು, ಹಸಿರು ಶಾಲು ಹೊದ್ದಿದ್ದಾರೆ. ದೇವರು ಮತ್ತು ರೈತರ ಹೆಸರಿನಲ್ಲಿ ಯಡಿಯೂರಪ್ಪ ಅವರು ರಾಜ್ಯದ 24ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.