ಉಳ್ಳಾಲ್ ನ್ಯೂಸ್ ನೆಟ್ ವರ್ಕ್
ಕೊಣಾಜೆ: ಕೊಣಾಜೆ ನಡುಪದವು ಸಮೀಪದ ಪಟ್ಟೋರಿ ಬಳಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ತೋಟಕ್ಕೆ ಉರುಳಿ ಬಿದ್ದ ಘಟನೆ ಸೋಮವಾರ ನಡೆದಿದ್ದು, ಕಾರು ಬಿದ್ದ ರಭಸಕ್ಕೆ ತೋಟದಲ್ಲಿದ್ದ ತೆಂಗಿನ ಮರವೊಂದು ಮುರಿದು ಬಿದ್ದಿದೆ. ಅದೃಷ್ಟವಶಾತ್ ಕಾರು ಚಾಲಕ ಅಲ್ಪಸ್ವಲ್ಪ ಗಾಯದೊಂದಿಗೆ ಪಾರಾಗಿದ್ದಾರೆ.