Site icon Ullalavani

ದೇರಳಕಟ್ಟೆ: ವಿದ್ಯಾರತ್ನ ಶಾಲೆಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ

ಉಳ್ಳಾಲ್ ನ್ಯೂಸ್ ನೆಟ್ ವರ್ಕ್

ದೇರಳಕಟ್ಟೆ: ದೇರಳಕಟ್ಟೆಯ ವಿದ್ಯಾರತ್ನ ಆಂಗ್ಲ ಮಾಧ್ಯಮ ಶಾಲೆಯ ಬಾಲಗಂಗಾಧರ ತಿಲಕ್ ಸ್ಕೌಟ್ ಕಂಪೆನಿ ಮತ್ತು ಸರೋಜಿನಿ ನಾಯ್ಡು ಗೈಡ್ಸ್ ಕಂಪೆನಿ ವತಿಯಿಂದ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ಆಚರಿಸಲಾಯಿತು.

ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರ ಜೀವನ ಆದರ್ಶ ನಮಗೆ ಮಾದರಿ ಎಂದು ಸಂಸ್ಥೆಯ ಆಡಳಿತ ನಿರ್ದೇಶಕ ಕೆ. ರವೀಂದ್ರ ಶೆಟ್ಟಿ ಉಳಿದೊಟ್ಟು ಹರೇಕಳ ಅಭಿಪ್ರಾಯಪಟ್ಟರು.

ಈ ಸಂದರ್ಬದಲ್ಲಿ ಸಂಸ್ಥೆಯ ಕಾರ್ಯದರ್ಶಿ ಸೌಮ್ಯ ಆರ್.ಶೆಟ್ಟಿ, ಶಾಲಾ ಮುಖ್ಯೋಪಾಧ್ಯಾಯಿನಿ ನಯೀಮ್ ಹಮೀದ್, ಕೆ.ಪಿ.ಸುರೇಶ್ ಮಾಡೂರು, ಶೇಖರ್ ಕೊಂಡೆವೂರು, ಸ್ಕೌಟ್ ಶಿಕ್ಷಕ ಭಾಸ್ಕರ್ ರಾವ್, ರವಿ ಕುಮಾರ್ ಕೋಡಿ ಉಪಸ್ಥಿತರಿದ್ದರು.

ವಿದ್ಯಾರ್ಥಿನಿ ದೇಶಿತಾ ಕಾರ್ಯಕ್ರಮ ನಿರೂಪಿಸಿದರು.

Exit mobile version