UN NETWORKS
ಉಳ್ಳಾಲ: ನಾಲ್ಕು ಕಾರುಗಳ ನಡುವೆ ಸರಣಿ ಅಪಘಾತ ನಡೆದಿರುವ ಘಟನೆ ರಾ.66 ರ ನೇತ್ರಾವತಿ ಸೇತುವೆಯಲ್ಲಿ ಶುಕ್ರವಾರ ಮಧ್ಯಾಹ್ನ ವೇಳೆ ಸಂಭವಿಸಿದೆ.

ಮಂಗಳೂರಿನಿಂದ ತೊಕ್ಕೊಟ್ಟು ಕಡೆಗೆ ಸಂಚರಿಸುತ್ತಿದ್ದ ಕಾರುಗಳ ನಡುವೆ ಅಪಘಾತ ಸಂಭವಿಸಿದೆ. ನೇತ್ರಾವತಿ ಸೇತುವೆಯಲ್ಲಿ ಅಮಿತ ವೇಗದಲ್ಲಿ ಕೇರಳ ಕಡೆಗೆ ಸಾಗುತ್ತಿದ್ದ ಡಸ್ಟರ್ ಕಾರಿನ ಚಾಲಕ ಹಠಾತ್ತನೆ ಬ್ರೇಕ್ ಹಾಕಿದ ಪರಿಣಾಮವಾಗಿ ಹಿಂಬದಿಯಲ್ಲಿದ್ದ ಹೋಂಡ ಸಿಟಿ ಕಾರು ಹಿಂಬದಿಗೆ ಗುದಿದ್ದು, ಅದೇ ರೀತಿಯಲ್ಲಿ ಅದರ ಹಿಂದೆ ಇದ್ದ ಇಕೋ ಸ್ಪೋಟ್ರ್ಸ್ ಕಾರು , ಅದರ ಹಿಂದೆಯಿದ್ದ ಆಲ್ಟೋ ಕಾರು ಢಿಕ್ಕಿ ಹೊಡೆದಿದೆ. ಏಕಕಾಲದಲ್ಲಿ ನಾಲ್ಕು ಕಾರುಗಳ ಮಧ್ಯೆ ಅಪಘಾತ ನಡೆದು ಸರಣಿ ಆಪಘಾತ ಸಂಭವಿಸಿದೆ. ಘಟನೆಯಲ್ಲಿ ಯಾರಿಗೂ ಗಾಯವಾಗಿಲ್ಲ. ಕಡಲ್ಕೊರೆತಕ್ಕೆ ಶಾಶ್ವತ ತಡೆಗೋಡೆ ಕಾಮಗಾರಿಯ ಸೊತ್ತುಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ಸೇತುವೆಯ ಮಧ್ಯಭಾಗದಲ್ಲಿ ಕೆಟ್ಟು ನಿಂತ ಪರಿಣಾಮ ಡಸ್ಟರ್ ಕಾರಿನ ಚಾಲಕ ಹಠಾತ್ ಬ್ರೇಕ್ ಹಾಕಿದ್ದಾನೆ ಎನ್ನಲಾಗಿದೆ. ಇದರಿಂದಾಗಿ ಹಿಂಬದಿಯಲ್ಲಿದ್ದ ಮಂಗಳೂರು ದಕ್ಷಿಣ ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.


