UN NETWORKS
ಉಳ್ಳಾಲ: ವಿದ್ಯಾರ್ಥಿಗಳಲ್ಲಿ ಪರಿಸರದ ಕುರಿತು ಕಾಳಜಿ ಅಗತ್ಯವಿದ್ದು, ಶಿಕ್ಷಣದೊಂದಿಗೆ ಪರಿಸರ ರಕ್ಷಣೆಗೆ ಆದ್ಯತೆ ನೀಡುತ್ತಿದ್ದು, ಈ ಮೂಲಕ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವ ಕಾರ್ಯ ಶಿಕ್ಷಣ ಸಂಸ್ಥೆಯಿಂದ ನಡೆಯಲಿದೆ ಎಂದು ಪಾನೀರ್‍ನ ಆಸ್ಸಿಸಿ ಸೆಂಟ್ರಲ್ ಸ್ಕೂಲ್‍ನ ಪ್ರಾಂಶುಪಾಲೆ ಸಿಸ್ಟರ್ ಜೂಲಿಯಾನ ಪಾೈಸ್ ಅಭಿಪ್ರಾಯಪಟ್ಟರು.
ದೇರಳಕಟ್ಟೆಯ ಪಾನೀರ್‍ನಲ್ಲಿರುವ ಅಸ್ಸಿಸಿ ಸೆಂಟ್ರಲ್ ಸ್ಕೂಲ್‍ನಲ್ಲಿ ಶಾಲಾ ಪ್ರಾರಂಬೊತ್ಸವ ಪ್ರಯುಕ್ತ ಸ್ವಚ್ಛ ಪರಿಸರ ಸಂದೇಶ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಭಾಸ್ಕರ ರೈ, ಚಿತ್ರಕಲಾ ಶಿಕ್ಷಕ ಸೂರ್ಯಕಾಂತ್ ವಿದ್ಯಾರ್ಥಿ ಪ್ರತಿನಿಧಿಗಳು ಉಪಸ್ಥಿತರಿದ್ದರು. ಸ್ವಚ್ಛ ಪರಿಸರ ಜಾಗೃತಿ ಪ್ರಯುಕ್ತ ಪರಿಸರಸದಲ್ಲಿ ವಿವಿಧ ಗಿಡಗಳ ಬೀಜ ಹಾಕಲಾಯಿತು.



