UN NETWORKS
ಬೋಳಿಯಾರ್: ಬಿಜೆಪಿ ಇಂದು ದೇಶದಲ್ಲಿ ಬೆಳೆಯಲು ಪಕ್ಷದ ಹಿರಿಯರು ಹಾಕಿದ ಅಡಿಪಾಯದಿಂದ ಸಾಧ್ಯವಾಗಿದ್ದು, ಮಂಗಳೂರು ವಿಧಾನಸಭಾ ಕ್ಷೇತ್ರದಲ್ಲಿ 61 ಸಾವಿರ ಮತಗಳು ಪಡೆಯಲು ಪಕ್ಷದ ಚಿಹ್ನೆಯಾದ ತಾವರೆ ಮತ್ತು ಪ್ರತೀ ಕಾರ್ಯಕರ್ತರ ಅವಿರತ ಶ್ರಮದಿಂದ ಸಾಧ್ಯವಾಗಿದೆ ಎಂದು ಮಂಗಳೂರು ವಿಧಾನಸಭಾ ಕ್ಷೇತ್ರ ಬಿಜೆಪಿ ಅಧ್ಯಕ್ಷ ಸಂತೋಷ್ ಕುಮಾರ್ ರೈ ಬೋಳಿಯಾರ್ ಅಭಿಪ್ರಾಯಪಟ್ಟರು. ಅವರು ಮಂಗಳೂರು ವಿಧಾನ ಸಭಾ ಕ್ಷೇತ್ರದಲ್ಲಿ ಚುನಾವಣಾ ಸಂದರ್ಭದಲ್ಲಿ ದುಡಿದ ಪಕ್ಷದ ಕಾರ್ಯಕರ್ತರಿಗೆ ಏರ್ಪಡಿಸಲಾಗಿದ್ದ ಅಭಿನಂದನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕ್ಷೇತ್ರದಲ್ಲಿ ಕಳೆದ ಚುನಾವಣೆಗೆ ಹೋಲಿಸಿದರೆ ಸುಮಾರು 20 ಸಾವಿರ ಅ„ಕ ಮತಗಳು ಬಂದಿದೆ. ಜಿಲ್ಲೆಯ ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಜಯಗಳಿಸಿದರೂ ಮಂಗಳೂರು ವಿಧಾನಸಭಾ ಕ್ಷೇತ್ರದಲ್ಲಿ ಸೋತರು ಹೆಚ್ಚುವರಿ ಮತಗಳನ್ನು ಪಡೆದ ಗೆಲುವು ನಮ್ಮಲ್ಲಿದೆ. ಈ ಮತಗಳು ಉಆವುದೇ ವೈಯಕ್ತಿಕ ಮತಗಳು ಅಲ್ಲ ಬಿಜೆಪಿ ಪಕ್ಷದ ಚಿಹ್ನೆ ಮತ್ತು ಕಾರ್ಯಕರ್ತರ ಬೆವರಿನ ಹನಿ ಮತಗಳಾಗಿ ಪರಿವರ್ತನೆಯಾಗಿದ್ದು, ಮುಂದಿನ ದಿನಗಳಲ್ಲಿ ಪಕ್ಷವನ್ನು ಇನ್ನಷ್ಟು ಬಲಗೊಳಿಸಲು ಇಂದಿನಿಂದಲೇ ಕಾರ್ಯಕರ್ತರು ಶ್ರಮಿಸಬೇಕಾಗಿದ್ದು, ಮುಂದಿನ ದಿನಗಳಲ್ಲಿ ಜಿಲ್ಲೆಯಲ್ಲಿ 8 ಕ್ಷೇತ್ರಗಳು ಬಿಜೆಪಿ ಪಾಲಾಗಲಿದೆ ಎಂದರು.
ಮಾಜಿ ಶಾಸಕ ಕೆ. ಜಯರಾಮ ಶೆಟ್ಟಿ ಮಾತನಾಡಿ ಮಂಗಳೂರು ವಿಧಾನ ಸಭಾ ಕ್ಷೇತ್ರದಲ್ಲಿ ಬಿಜೆಪಿ ಹಂತ ಹಂತವಾಗಿ ನಾವು ಬೆಳೆಯುತ್ತಿದ್ದೇವೆ. ಹಿಂದೆ ಉಳ್ಳಾಲ ಗ್ರಾಮಾಂತರದಲ್ಲಿ 500 ಮತಗಳಿಂದ ಪ್ರಾರಂಭಗೊಂಡ ಮತಭೇಟೆ 60 ಸಾವಿರ ದಾಟುವಲ್ಲಿ ಯಶಸ್ವಿಯಾಗಿದ್ದು, ಮುಂದಿನ ದಿನಗಳಲ್ಲಿ ಗೆಲುವು ನಮ್ಮದೇ ಎಂದರು. ಮಂಗಳೂರು ಲೋಕಸಭಾ ಕ್ಷೇತ್ರದ ಸಂಸದ ನಳಿನ್ ಕುಮಾರ್ ಕಟೀಲು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಜಿಲ್ಲಾ ಪ್ರ.ಕಾರ್ಯದರ್ಶಿ ಕ್ಯಾಪ್ಟನ್ ಬ್ರಿಜೇಶ್ ಚೌಟ, ಜಿಲ್ಲಾ ಉಪಾಧ್ಯಕ್ಷ ಚಂದ್ರಹಾಸ್ ಉಳ್ಳಾಲ್, ರಾಜ್ಯ ಕಾರ್ಯಕಾರಿಣಿ ಸದಸ್ಯ ರವೀಂದ್ರ ಶೆಟ್ಟಿ ಉಳಿದೊಟ್ಟು, ಮಂಗಳೂರು ವಿಧಾನಸಭಾ ಕ್ಷೇತ್ರ ಬಿಜೆಪಿ ಮಾಜಿ ಅಧ್ಯಕ್ಷ ಚಂದ್ರಶೇಖರ್ ಉಚ್ಚಿಲ್, ಮಂಗಳೂರು ಕ್ಷೇತ್ರದ ಚುನಾವಣಾ ಸಂಯೋಜಕ ಹರೀಶ್ಚಂದ್ರ ಮಂಜೇಶ್ವರ, ಜಿಲ್ಲಾ ಪಂಚಾಯತ್ ಸದಸ್ಯರಾದ ಧನಲಕ್ಷ್ಮಿ ಗಟ್ಟಿ, ರವೀಂದ್ರ ಕಂಬಳಿ, ತಾಲೂಕು ಪಂಚಾಯತ್ ಸದಸ್ಯರಾದ ನವೀನ್ ಪಾದಲ್ಪಾಡಿ, ಗಣೇಶ್ ಸುವರ್ಣ , ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಸತೀಶ್ ಕುಂಪಲ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ನಿಧನರಾದ ಬಿಜಪಿಯ ಹಿರಿಯ ಮುಖಂಡ ದೇವಪ್ಪ ಕುಲಾಲ್ ನರಿಂಗಾನ ಮತ್ತು ಯುವ ಕಾರ್ಯಕರ್ತ ಮಹೇಶ್ ಭಟ್ ಕೊಡಕಲ್ಲು ಅವರಿಗೆ ಶ್ರದ್ಧಾಂಜಲಿ ಸಮರ್ಪಿಸಲಾಯಿತು.
ಮಂಗಳೂರು ಕ್ಷೇತ್ರ ಬಿಜೆಪಿ ಪ್ರ. ಕಾರ್ಯದರ್ಶಿ ಮನೋಜ್ ಆಚಾರ್ಯ ಸ್ವಾಗತಿಸಿದರು. ಟಿ.ಜಿ. ರಾಜಾರಾಮ ಭಟ್ ಪ್ರಸ್ತಾವನೆಗೈದರು. ಹರಿಯಪ್ಪ ಸಾಲಿಯಾನ್ ಮತ್ತು ಮೋಹನ್ ದಾಸ್ ಶೆಟ್ಟಿ ಮತ್ತು ಪ್ರಕಾಶ್ ಸಿಂಪೋನಿ ಕಾರ್ಯಕ್ರಮ ನಿರೂಪಿಸಿದರು. ಯಶವಂತ ಅಮೀನ್ ವಂದಿಸಿದರು.


