UN NETWORKS
ಮುಡಿಪು: ಸಂಬಾರತೋಟ ವಿಸ್ಡಮ್ ವೆಲ್ಫೇರ್ ಅಸೋಸಿಯೇಶನ್ ವತಿಯಿಂದ ಶಾಲಾ ಮಕ್ಕಳಿಗೆ ಪುಸ್ತಕ ವಿತರಣೆ ಹಾಗೂ ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿಯಲ್ಲಿ ಉತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ ಮತ್ತು ಸಂಸ್ಥೆಯ ಲಾಂಛನ ಬಿಡುಗಡೆ ಕಾರ್ಯಕ್ರಮಕ್ಕೆ ಸಂಬಾರತೋಟ ನೂರಾನಿಯ್ಯಾ ಜುಮಾ ಮಸೀದಿ ಖತೀಬರಾದ ಪಿ.ಕೆ.ಮುಹಮ್ಮದ್ ಮದನಿ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು ವಿದ್ಯೆಗೆ ಇರುವಷ್ಟು ಪ್ರಾಧಾನ್ಯತೆ ಈ ಲೋಕದಲ್ಲಿ ಬೇರೆ ಯಾವುದಕ್ಕೂ ಇಲ್ಲ, ಈ ನಿಟ್ಟಿನಲ್ಲಿ ಮಕ್ಕಳ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ನೀಡುತ್ತಿರುವ ಸಂಘದ ಕಾರ್ಯ ಶ್ಲಾಘನೀಯ ಎಂದರು.
ಸಂಬಾರತೋಟ ವಿಸ್ಡಮ್ ವೆಲ್ಫೇರ್ ಅಸೋಸಿಯೇಶನ್ ಉಪಾಧ್ಯಕ್ಷ ಮುಹಮ್ಮದ್ ಅಸ್ಗರ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು, ಕಾರ್ಯದರ್ಶಿ ಅನೀಶ್ ದನ್ಯವಾದಗೈದರು.