Site icon Ullalavani

ವಿಶ್ವಮಂಗಳ ಶಾಲೆ ವಿದ್ಯಾರ್ಥಿಗಳಿಂದ ಜಾಗೃತಿ ಜಾಥಾ

UN NETWORKS

ಕೊಣಾಜೆ: ವಿಶ್ವಮಂಗಳ ವಿದ್ಯಾಸಂಸ್ಥೆಯಲ್ಲಿ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ವಿದ್ಯಾರ್ಥಿಗಳು ಪರಿಸರ ಗೀತೆಯೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಪರಿಸರದ ಮಹತ್ತ್ವವನ್ನು ಕುರಿತು ಮಾತನಾಡಿದರು. ಘೋಷಣೆಗಳೊಂದಿಗೆ, ಕೊಣಾಜೆ ಪರಿಸರದಲ್ಲಿ ಜಾಥಾವನ್ನು ನಡೆಸಿದ ಬಳಿಕ ಶಾಲಾ ಆವರಣವನ್ನು ಸ್ವಚ್ಛಗೊಳಿಸುವುದರೊಂದಿಗೆ ಪರಿಸರ ಸ್ವಚ್ಛತೆಯ ಬಗ್ಗೆ ಜಾಗೃತಿಯನ್ನು ಮೂಡಿಸಲಾಯಿತು. ವಿದ್ಯಾರ್ಥಿಗಳಿಗೆ ಪರಿಸರ ಸಂರಕ್ಷಣೆಯ ಬಗ್ಗೆ ಪರಿಸರಗೀತೆಯನ್ನು ಹಾಡುವ ಸ್ಪರ್ಧೆಯನ್ನು ಏರ್ಪಡಿಸಲಾಯಿತು. ಹಾಗೂ ಶಾಲಾ ಆವರಣದಲ್ಲಿ ಗಿಡಗಳನ್ನು ನೆಡಲಾಯಿತು. ಈ ಸಂದರ್ಭದಲ್ಲಿ ಶಾಲಾ ಮುಖ್ಯಸ್ಥರು, ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

Exit mobile version