UN NETWORKS
ಉಳ್ಳಾಲ: ಆತ್ಮಶಕ್ತಿ ವಿವಿದೋದ್ದೇಶ ಸಹಕಾರಿ ಸಂಘದ ಗ್ರಾಹಕರು ಪಡೆದ ಸೇವೆಯೇ ಈ ಸಂಘದ ಬೆಳವಣಿಗೆಗೆ ಸ್ಪೂರ್ತಿ ಎಂದು ಆತ್ಮಶಕ್ತಿ ವಿವಿದೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಚಿತ್ತರಂಜನ್ ಬೋಳಾರ್ ಅಭಿಪ್ರಾಯಪಟ್ಟರು. ಆತ್ಮಶಕ್ತಿ ವಿವಿದೋದ್ದೇಶ ಸಹಕಾರಿ ಸಂಘ ಉಳ್ಳಾಲ ಶಾಖೆಯ ತೃತೀಯ ವಾರ್ಷಿಕೋತ್ಸವ ಹಾಗೂ ಗ್ರಾಹಕರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಉಳ್ಳಾಲ ಶಾಖೆಯು ಕಳೆದ ಮೂರು ವರ್ಷದ ಅವಧಿಯಲ್ಲಿ ಹೆಚ್ಚು ಗ್ರಾಹಕರನ್ನು ಹೊಂದಿ ಉತ್ತಮ ಲಾಭದಲ್ಲಿ ಮುನ್ನಡೆಯುತ್ತಿದೆ ಹಾಗೂ ಗ್ರಾಹಕರಿಗೆ ಉತ್ತಮ ಸೇವೆಯನ್ನು ನೀಡುತ್ತಿದೆ. ಈ ಯಶಸ್ಸು ಅಭಿವೃದ್ದಿಗೆ ಸಂಘದ ಸದಸ್ಯರು, ಗ್ರಾಹಕರು ಕಾರಣಿಭೂತರು ಎಂದರು.
ಸಂಘದ ಉಪಾಧ್ಯಕ್ಷ ನೇಮಿರಾಜ್ ಪಿ. ಮಾತನಾಡಿ ಸಂಘದಲ್ಲಿ ಕೆ.ಎಸ್.ಅರ್.ಟಿ.ಸಿ ಮತ್ತು ಖಾಸಗಿ ಟಿಕೇಟ್ ಬುಕ್ಕಿಂಗ್ ಅಲ್ಲದೆ ಜೀವ ವಿಮೆ, ಆರೋಗ್ಯ ವಿಮೆ, ಹಾಗೂ ಮಣಿಪಾಲ್ ಆರೋಗ್ಯ ಕಾರ್ಡ್ನ್ನು ನೋಂದಯಿಸುವ ಸೌಲಭವಿದ್ದು, ಅದರ ಸದುಪಯೋಗ ಪಡೆದುಕೊಳ್ಳಲು ತಿಳಿಸಿದರು.
ಸಂಘದ ಸದಸ್ಯರು , ಸಿಬಂದಿಗಳು ಮತ್ತು ಪದಾಧಿಕಾರಿಗಳು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಸಭೆಯಲ್ಲಿ ಸಂಘದ ಸದಸ್ಯರು ಸಂಘದ ಬೆಳವಣಿಗೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ನಿರ್ದೇಶಕ ಆನಂದ್ ಎಸ್. ಕೊಂಡಾಣ, ಸೀತಾರಾಮ್ ಎನ್, ಚಂದ್ರಹಾಸ್ ಮರೋಳಿ ಹಾಗೂ ಸಲಹಾ ಸಮಿತಿ ಸದಸ್ಯರಾದ ಗೋಪಾಲ್ ಯು.ಕೆ. , ಚಿತ್ರಾಕ್ಷಿ ಭಾಸ್ಕರ್ ಮತ್ತಿತರರು ಉಪಸ್ಥಿತರಿದ್ದರು.
ಸಂಘದ ಸಿಬ್ಬಂದಿ ಮೇಘ ಸ್ವಾಗತಿಸಿದರು. ಶಾಖಾಧಿಕಾರಿ ಹರಿಣಾಕ್ಷಿ ಕಾರ್ಯಕ್ರಮ ನಿರೂಪಿಸಿದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೌಮ್ಯ ವಿಜಯ್ ವಂದಿಸಿದರು.


