Site icon Ullalavani

ಉಳ್ಳಾಲ ನಗರಸಭೆ ಪ್ಲಾಸ್ಟಿಕ್ ಮುಕ್ತಕ್ಕೆ ಜನರ ಸಹಕಾರ ಅಗತ್ಯ : ವಾಣಿ ವಿ.ಆಳ್ವ

UN NETWORKS

ಉಳ್ಳಾಲ: ಉಳ್ಳಾಲವನ್ನು ಪ್ಲಾಸ್ಟಿಕ್ ಮುಕ್ತ ನಗರ ಮಾಡುವ ನಿಟ್ಟಿನಲ್ಲಿ ಉಳ್ಳಾಲ ನಗರಸಭೆ ಯೋಜನೆ ರೂಪಿದ್ದು, ಈ ಯೋಜನೆಯನ್ನು ಸಾಕಾರಗೊಳಿಸಲು ನಗರಸಭಾ ವ್ಯಾಪ್ತಿಯ ಜನರ ಸಹಕಾರ ಅತೀ ಅಗತ್ಯ ಎಂದು ಉಳ್ಳಾಲ ನಗರಸಭಾ ಪೌರಾಯುಕ್ತೆ ವಾಣಿ ವಿ.ಆಳ್ವ ಅಭಿಪ್ರಾಯಪಟ್ಟರು.

ಉಳ್ಳಾಲ ನಗರಸಭಾ ವತಿಯಿಂದ ಪರಿಸರ ಸಪ್ತಾಹದ ಅಂಗವಾಗಿ ಮಂಗಳವಾರ ಪರಿಸರ ಸಂರಕ್ಷಣೆಯ ಬಗ್ಗೆ ತೊಕ್ಕೊಟ್ಟು ಬಸ್ಸು ನಿಲ್ದಾಣದ ಬಳಿ ನಡೆದ ಬೀದಿ ನಾಟಕಕ್ಕೆ ಚಾಲನೆ ನೀಡಿ ಮಾತನಾಡಿದರು. ಉಳ್ಳಾಲವನ್ನು ಮಾದರಿ ನಗರವನ್ನಾಗಿ ರೂಪಿಸುವ ನಿಟ್ಟಿನಲ್ಲಿ ಕಾರ್ಯಗಳು ನಡೆಯುತ್ತಿದೆ. ಕಸ ವಿಲೇವಾರಿ ಸೇರಿದಂತೆ ನಗರಸಭಾ ವ್ಯಾಪ್ತಿಯಲ್ಲಿ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿದ್ದು, ಮುಂದಿನ ದಿನಗಳಲ್ಲಿ ಪ್ಲಾಸ್ಟಿಕ್ ನಿರ್ಮೂಲನೆ ಮಾಡುವ ನಿಟ್ಟಿನಲ್ಲಿ ಜನರಲ್ಲಿ ಜಾಗೃತಿ ಮೂಸಿಲು ಬೀದಿ ನಾಟಕದಂತಹ ಮಾದ್ಯಮವನ್ನು ಬಳಸಿಕೊಳ್ಳಲಾಗುತ್ತಿದೆ ಎಂದರು.

ಉಳ್ಳಾಲ ನಗರಸಭಾ ಅಧ್ಯಕ್ಷ ಹುಸೈನ್ ಕುಂಇಮೋನು ಮಾತನಾಡಿ ನಗರಸಭೆಯನ್ನು ಸ್ವಚ್ಛ ನಗರಸಭೆ ಮಾಡುವಲ್ಲಿ ಕೌನ್ಸಿಲರ್‍ಗಳೊಂದಿಗೆ ಜನರ ಸಹಭಾಗಿತ್ವ ಅಗತ್ಯವಿದೆ ಎಂದರು. ತೊಕ್ಕೊಟ್ಟು ಪೆರ್ಮನ್ನೂರಿನ ಸಂತ ಸೆಬಾಸ್ತಿಯನ್ನರ ಪ್ರೌಢಶಾಲಾ ವಿದ್ಯಾರ್ಥಿಗಳು ತೊಕ್ಕೊಟ್ಟು ಬಸ್ಸು ನಿಲ್ದಾಣ ಮತ್ತು ಉಳ್ಳಾಲ ಬಸ್ಸು ನಿಲ್ದಾಣದಲ್ಲಿ ಬೀದಿ ನಾಟಕ ನಡೆಸಿಕೊಟ್ಟರು.

ಹಿರಿಯ ಆರೋಗ್ಯ ನಿರೀಕ್ಷಕ ಜಯಶಂಕರ್,ಕಿರಿಯ ಆರೋಗ್ಯ ನಿರೀಕ್ಷಕ ರಾಜೇಶ್, ಸಿಬಂದಿ ಅಂಗಾರ, ಶಾಲಾ ಶಿಕ್ಷಕರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Exit mobile version