UN NETWORKS
ಉಳ್ಳಾಲ: ಸಂಚರಿಸುತ್ತಿದ್ದ ಬಸ್ಸೊಂದು ಹಠಾತ್ ಹಾಕಿದ್ದರಿಂದ ಹಿಂಬದಿಯಲ್ಲಿ ಬರುತ್ತಿದ್ದ ದ್ವಿಚಕ್ರ ವಾಹನ ಬಸ್‌ಗೆ ಢಿಕ್ಕಿ ಹೊಡೆದ ಘಟನೆ ಉಳ್ಳಾಲ ಸೇತುವೆಯಲ್ಲಿ ಇಂದು ಬೆಳಗ್ಗೆ ನಡೆದಿದೆ. ಇದರಿಂದ ದ್ವಿಚಕ್ರ ವಾಹನ ಸವಾರನಿಗೆ ಗಾಯಗಳಾಗಿವೆ.
ವೇಗವಾಗಿ ಸಂಚರಿಸುತ್ತಿದ್ದ ಬಸ್ ಸೇತುವೆಯಲ್ಲಿ ಹಠಾತ್ ಬ್ರೇಕ್ ಹಾಕಿದ್ದರಿಂದ ಈ ಅಪಘಾತ ಸಂಭವಿಸಿದೆ ಎಂದು ಹೇಳಲಾಗಿದೆ. ಈ ವೇಳೆ ಬಸ್ಸಿನ ಹಿಂದೆಯೇ ಇದ್ದ ದ್ವಿಚಕ್ರ ವಾಹನದ ಚಾಲಕನಿಗೆ ನಿಯಂತ್ರಣ ತಪ್ಪಿದ್ದರಿಂದ ದ್ವಿಚಕ್ರ ವಾಹನವು ಬಸ್ಸಿಗೆ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ದ್ವಿಚಕ್ರ ವಾಹನ ಬಸ್ಸಿನಡಿಗೆ ನುಗ್ಗಿದೆ. ಇದರಿಂದ ದ್ವಿಚಕ್ರ ವಾಹನ ಸವಾರನಿಗೆ ಗಾಯಗಳಾಗಿದ್ದು, ಆವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಗಾಯಾಳು ಬಗ್ಗೆ ಹೆಚ್ಚಿನ ವಿವರಗಳು ತಿಳಿದುಬಂದಿಲ್ಲ.


