UN NETWORKS
ತಲಪಾಡಿ: ಜಗತ್ತಿಗೆ ಭಾರತ ನೀಡಿದ ಶ್ರೇಷ್ಠ ಕೊಡುಗೆಯಾಗಿರುವ ಯೋಗ ಶಿಕ್ಷಣದ ಮಹತ್ವ ವಿದ್ಯಾರ್ಥಿಗಳಿಗೆ ಅತೀ ಅಗತ್ಯವಾಗಿದ್ದು, ವಿದ್ಯಾರ್ಥಿಗಳು ಈ ಶಿಕ್ಷಣವನ್ನು ದೈನಂದಿನ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು ಎಂದು ಆರ್ಟ್ ಆಫ್ ಲಿವಿಂಗ್ನ ಯೋಗ ಶಿಕ್ಷಕಿ ಸುಮನಾ ಕಾಮತ್ ಅಭಿಪ್ರಾಯಟ್ಟರು.
ತಲಪಾಡಿಯ ಶಾರದಾ ವಿದ್ಯಾನಿಕೇತನ ಪಬ್ಲಿಕ್ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಯೋಗ ಶಿಕ್ಷಣದ ಮಾರ್ಗದರ್ಶನ ನೀಡಿ ಮಾತನಾಡಿದರು
ಕಾರ್ಯಕ್ರಮದಲ್ಲಿ ಆರ್ಟ್ ಆಫ್ ಲಿವಿಂಗ್ನ ತಂಡವು ಶಾರದಾ ವಿದ್ಯಾನಿಕೇತನ ವಿದ್ಯಾರ್ಥಿಗಳಿಗೆ ಯೋಗದ ವಿವಿಧ ಆಸನಗಳಾದ ಚಕ್ರಾಸನ, ವಜ್ರಾಸನ, ಗರುಡಾಸನ, ಉಷ್ಟ್ರಾಸನ, ಭುಜಂಗಾಸನ, ಮಕರಾಸನ, ಬಕಾಸನ, ಪ್ರಾಣಾಯಮಗಳನ್ನು ಪ್ರಾತ್ಯಕ್ಷಿತೆಯ ಮೂಲಕ ತಿಳಿಸಿಕೊಟ್ಟರು. ದೈಹಿಕ ಶಿಕ್ಷಕಿ ಅರುಣಾ ಕಾರ್ಯಕ್ರಮ ನಿರೂಪಿಸಿದರು, ಶಾಲಾ ಪ್ರಾಂಶುಪಾಲೆ ಸುಷ್ಮಾ ಜನಾರ್ಧನ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.


