UN NETWORKS
ಉಳ್ಳಾಲ: ಕೇಸರಿ ಮಿತ್ರ ವೃಂದ ಸೇವಾ ಟ್ರಸ್ಟ್ ಇದರ ಅಂಗ ಸಂಸ್ಥೆಯಾದ ಪತಂಜಲಿ ಯೋಗ ಶಿಕ್ಷಣ ಸಮಿತಿ ಕೇಸರಿ ಶಾಖೆ ಇದರ ವತಿಯಿಂದ ವಿಶ್ವ ಯೋಗ ದಿನಾಚರಣೆಯ ಪ್ರಯುಕ್ತ ಸ್ಥಳೀಯ ಕುಂಪಲ ಶಾಲಾ ಮಕ್ಕಳಿಗೆ ಯೋಗಾಭ್ಯಾಸ ಮತ್ತು ಯೋಗದ ಬಗ್ಗೆ ಮಾಹಿತಿ ಶಿಬಿರವನ್ನು ಕುಂಪಲ ಶಾಲೆಯಲ್ಲಿ ನಡೆಸಲಾಯಿತು.
ಕೇಸರಿ ಯೋಗ ಶಾಖೆ ಮತ್ತು ಪತಂಜಲಿ ಯೋಗ ಶಿಕ್ಷಣ ಸಮಿತಿಯ ಯೋಗ ಬಂಧುಗಳು ಕಾರ್ಯಕ್ರಮ ನಡೆಸಿ ಕೊಟ್ಟರು., ಶಾಲಾ ಅಧ್ಯಾಪಕ ವೃಂದ, ಶಾಲಾಭಿವೃದ್ಧಿ ಸಮಿತಿ ಸದಸ್ಯರು, ಕೇಸರಿ ಮಿತ್ರ ವೃಂದ ಮತ್ತು ಕೇಸರಿ ಮಾತೃಮಂಡಳಿ ಸದಸ್ಯರು ಉಪಸ್ಥಿತರಿದ್ದರು.


