UN NETWORKS
ಹರೇಕಳ: ವಿದ್ಯಾರ್ಥಿಗಳು ದೈಹಿಕವಾಗಿ, ಮಾನಸಿಕವಾಗಿ, ಆಧ್ಯಾತ್ಮಿಕವಾಗಿ ಬಲಿಷ್ಠರಾಗಬೇಕಾದರೆ ಯೋಗವನ್ನು ದೈನಂದಿನ ಚಟುವಟಿಕೆಯನ್ನಾಗಿ ರೂಢಿಸಿಕೊಳ್ಳಬೇಕು ಎಂದು ಉದ್ಯಮಿ ಹರಿಶ್ಚಂದ್ರ ಶೆಟ್ಟಿ ಅಭಿಪ್ರಾಯಪಟ್ಟರು.
ಮುಖ್ಯ ಅತಿಥಿಯಾಗಿ ಲಯನ್ಸ್ ಕ್ಲಬ್ ಮಂಗಳಗಂಗೊತ್ರಿಯ ಮಾಜಿ ಅಧ್ಯಕ್ಷ ರಾಜೇಶ್ ಶೆಟ್ಟಿ ಪಜೀರುಗುತ್ತುರವರು ಪ್ರತಿ ದಿನ ಯೋಗ ಮಾಡುವುದರಿಂದ ಮನಸ್ಸು ಪರಿಶುದ್ಧಗೊಂಡು ಉಲ್ಲಾಸದಿಂದ ಇರಲು ಸಾಧ್ಯವಿದೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯ ಕೆ. ರವೀಂದ್ರ ರೈ ವಹಿಸಿದ್ದರು. ಆರ್ಟ್ ಆಫ್ ಲೀವಿಂಗ್ ಸಂಸ್ಥೆಯ ಯೋಗ ಸದಸ್ಯರಾದ ಶಿವಪ್ರಕಾಶ್ ಪಕ್ಕಳ, ಸುನೀತಾ ಉದಯ ಕುಮಾರ್, ರೇಖಾ ಇವರು ಯೋಗಾಭ್ಯಾಸವನ್ನು ನೆರವೇರಿಸಿ ಕೊಟ್ಟರು. ಶಿಕ್ಷಕ ರವಿಶಂಕರ್ ಸ್ವಾಗತಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ತ್ಯಾಗಂ ಹರೇಕಳ ಪ್ರಸ್ತಾವನೆಗೈದು ಕಾರ್ಯಕ್ರಮ ನಿರ್ವಹಿಸಿದರು. ಕೌಶಿಕ್ ಪ್ರಾರ್ಥಿಸಿದರು. ಹಿರಿಯ ಶಿಕ್ಷಕಿ ಉಷಾಲತ ವಂದಿಸಿದರು.