Site icon Ullalavani

ವಿದ್ಯಾರ್ಥಿಗಳಲ್ಲಿ ಪರಿಸರ ಪ್ರೇಮ ಮೂಡಿಸಿ : ಸೀತಾರಾಮ ಬಂಗೇರ

UN NETWORKS

ಉಳ್ಳಾಲ: ವಿದ್ಯಾರ್ಥಿಗಳಲ್ಲಿ ಪರಿಸರ ಪ್ರೇಮ ಮೂಡಿಸುವುದರೊಂದಿಗೆ ಸ್ವಸ್ಥ ಸಮಾಜ ನಿರ್ಮಾಣದ ನಿಟ್ಟಿನಲ್ಲಿ ಶಿಕ್ಷಣ ನೀಡುವ ಅಗತ್ಯವಿದ್ದು, ಈ ನಿಟ್ಟಿಲ್ಲಿ ಶಾಲಾ ಶಿಕ್ಷಕರು ಮತ್ತು ವಿದ್ಯಾರ್ಥಿಗಳ ಹೆತ್ತವರು ತಮ್ಮ ವಿದ್ಯಾರ್ಥಿಗಳಿಗೆ ಶಿಕ್ಷಣದೊಂದಿಗೆ ಇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಪ್ರೇರೇಪಿಸಬೇಕು ಎಂದು ಸಾರ್ವಜನಿಕ ಶ್ರೀ ಶಾರದಾ ಮಹೋತ್ಸವ ಸಮಿತಿ ಕೊಲ್ಯ ಇದರ ಗೌರವ ಅಧ್ಯಕ್ಷ ಸೀತಾರಾಮ ಬಂಗೇರ ಅಭಿಪ್ರಾಯಪಟ್ಟರು.

ಕೊಲ್ಯ ಶಾರದಾ ಸದನದಲ್ಲಿ ನಡೆದ ಕನ್ನಡ ಮಾದ್ಯಮದಲ್ಲಿ ವ್ಯಾಸಂಗ ಮಾಡುತ್ತಿರುವ ಹಿರಿಯ ಪ್ರಾಥಮಿಕ ಶಾಲೆಯ ಹಿರಿಯ ಪ್ರಾಥಮಿಕ ಶಾಲಾ ಆಯ್ದ ಮಕ್ಕಳಿಗೆ ಸಹಾಯಧನ ಹಾಗೂ ಪರಿಸರ ಪ್ರೀತಿ ಸಂರಕ್ಷಣೆಗಾಗಿ ಸಸಿ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ದ.ಕ.ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಕುಂಪಲ ಇದರ ನಿವೃತ ಮುಖ್ಯೋಪಾಧ್ಯಾಯ ವಿಶ್ವನಾಥ ಎಮ್. ಕೆ. ಪರಿಸರ ಪ್ರೇಮಿ ಮಾದವ ಉಳ್ಳಾಲ್, ಕೊಲ್ಯ ಆದರ್ಶ ಮಿತ್ರ ಮಂಡಳಿಯ ಅಧ್ಯಕ್ಷ ಸತೀಶ್ ಕುಮಾರ್,ಸಾರ್ವಜನಿಕ ಶ್ರೀ ಶಾರದಾ ಮಹೋತ್ಸವ ಸಮಿತಿ ಕೊಲ್ಯ ಸೋಮೇಶ್ವರ ಇದರ ಅಧ್ಯಕ್ಷ ಯಶೋಧರ ಟಿ., ಕಾರ್ಯದರ್ಶಿ ಉಮೇಶ್ ಕುಲಾಲ್ ಉಪಸ್ಥಿತರಿದ್ದರು.ಸಮಿತಿ ಸದಸ್ಯ ಹರೀಶ್ಚಂದ್ರ ಕೊಲ್ಯ ಸ್ವಾಗತಿಸಿದರು. ಸಾಂಸ್ಕೃತಿಕ ಸಂಚಾಲಕ ತೋನ್ಸೆ ಪುಷ್ಪಲ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು. ಲೆಕ್ಕ ಪರಿಶೋಧಕ ಪ್ರಕಾಶ್ ಎಚ್. ಪ್ರಾಸ್ತವಿಕವಾಗಿ ಮಾತನಾಡಿದರು. ರಾಜೇಶ್ ಕೆ. ಎಸ್. `ಧನ ಸಹಾಯ ನೀಡುವ ಮಕ್ಕಳ ಪಟ್ಟಿಯನ್ನು ವಾಚಿಸಿದರು. ಪ್ರಧಾನ ಕಾರ್ಯದರ್ಶಿ ಉಮೇಶ್ ಕುಲಾಲ್ ವಂದಿಸಿದರು.

Exit mobile version