UN NETWORKS
ತಲಪಾಡಿ: ವಿದ್ಯಾರ್ಥಿಗಳು ಮಾದಕ ದ್ರವ್ಯದ ಸೇವನೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ತಿಳಿದುಕೊಂಡು, ಸಮಾಜ ತಿದ್ದುವ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕು ಎಂದು ಯೆನಪೋಯ ಮೆಡಿಕಲ್ ಕಾಲೇಜಿನ ಪೆಥಾಲಜಿ ವಿಭಾಗದ ವೈದ್ಯೆ ಡಾ| ಪಲ್ಲವಿ ಅಭಿಪ್ರಾಯಪಟ್ಟರು.
ಅವರು ಶಾರದಾ ವಿದ್ಯಾನಿಕೇತನದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಾದಕ ವ್ಯಸನ ವಿರೋಧಿ ದಿನಾಚರಣೆಯಲ್ಲಿ ಮುಖ್ಯ ಅಥಿತಿಗಳಾಗಿ ಭಾಗವಹಿಸಿ, ಮಾದಕ ವಸ್ತುಗಳ ಸೇವನೆಗೆ ಕಾರಣ, ಪರಿಣಾಮ ಮತ್ತು ಅದನ್ನು ಹೇಗೆ ತಡೆಗಟ್ಟಬಹುದು ಎಂಬುದರ ಕುರಿತು ವಿದ್ಯಾರ್ಥಿಗಳಿಗೆ ಉಪನ್ಯಾಸವನ್ನು ನೀಡಿದರು.
ಮಾದಕ ವಸ್ತುಗಳ ಸೇವನೆಯಿಂದ ವ್ಯಕ್ತಿಯ ಆರೋಗ್ಯದ ಮೇಲೆ ಗಂಭೀರವಾದ ಪರಿಣಾಮ ಉಂಟಾಗಿ ಆತ ಸಮಾಜಕ್ಕೊಂದು ಶಾಪಗ್ರಸ್ತ ವ್ಯಕ್ತಿಯಾಗಿ ಸಮಾಜದ ಅಧಃ ಪತನಕ್ಕೆ ಕಾರಣನಾಗುತ್ತಾನೆ. ಇಂತಹ ಸಂದರ್ಭ ದಲ್ಲಿ ಮಾದಕ ವ್ಯಸನದ ಕುರಿತು ಜಾಗೃತಿ ಮೂಡಿಸುವ ಕಾರ್ಯ ಅತೀ ಅವಶ್ಯಕವಾಗಿದ್ದು, ವಿದ್ಯಾರ್ಥಿಗಳು ಈ ನಿಟ್ಟಿನಲ್ಲಿ ಜಾಗೃತಿ ಮೂಡಿಸುವ ಕಾರ್ಯವನ್ನು ಮಾಡಬೇಕು ಎಂದರು.
ಈ ಕಾರ್ಯಕ್ರಮದಲ್ಲಿ ಶಾಲಾ ಪ್ರಾಂಶುಪಾಲೆ ಸುಷ್ಮ ದಿನಕರ್, ಉಪಪ್ರಾಂಶುಪಾಲ ಮೋಹನ್ ದಾಸ್, ಯೆನಪೋಯ ಮೆಡಿಕಲ್ ಕಾಲೇಜಿನ ಪೆಥಾಲಜಿ ವಿಭಾಗದ ಮುಖ್ಯಸ್ಥೆ ಡಾ| ಮೇಝಿ ಜೋಶ್, ವೈದ್ಯರುಗಳಾದ ಡಾ| ವಿಷ್ಣುದಾಸ್ ಪ್ರಭು, ಡಾ| ಚೇತನ್, ಡಾ| ರೇಖಾ, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.


