UN NETWORKS
ಉಳ್ಳಾಲ: ಜಿಲ್ಲೆಯಾದ್ಯಂತ ಕುಂಭದ್ರೋಣ ಹಾಗೂ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಸಾರ್ವಜನಿಕ ಸೊತ್ತುಗಳಿಗೆ ಅಪಾರ ಹಾನಿಯಾಗಿದೆ . ರಾಜ್ಯ ಸರಕಾರ ತುರ್ತು ಕ್ರಮಕೈಗೊಂಡು ಶೀಘ್ರವೇ ಸಂತ್ರಸ್ತರಿಗೆ ಪರಿಹಾರ ಒದಗಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ಉಳ್ಳಾಲ ನಗರಸಭೆ ವ್ಯಾಪ್ತಿಯ 23 ನೇ ವಾರ್ಡಿನಲ್ಲಿ ಬುಧವಾರ ಕುಸಿದುಬಿದ್ದ ಶಾರದಾ ಎಂಬವರ ಮನೆಗೆ ಗುರುವಾರ ಭೇಟಿ ನೀಡಿ ಮಾತನಾಡಿದರು.
ಈ ಸಂದರ್ಭ ಮಂಗಳೂರು ಕ್ಷೇತ್ರ ಬಿಜೆಪಿ ಅಧ್ಯಕ್ಷ ಸಂತೋಷ್ ರೈ ಬೋಳಿಯಾರ್, ಜಿ.ಪಂ ಮಾಜಿ ಉಪಾಧ್ಯಕ್ಷ ಸತೀಶ್ ಕುಂಪಲ, ಮಾಜಿ ಶಾಸಕ ಜಯರಾಮ ಶೆಟ್ಟಿ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಚಂದ್ರಹಾಸ್ ಉಳ್ಳಾಲ್, ಚಂದ್ರಶೇಖರ್ ಉಚ್ಚಿಲ್, ಬಿಜೆಪಿ ಜಿಲ್ಲಾ ಉಸ್ತುವಾರಿ ರಾಮಚಂದ್ರ ಬೈಕಂಪಾಡಿ, ಬಿಜೆಪಿ ರಾಜ್ಯ ಕಾರ್ಯಕಾರಿಣಿ ಮಂಡಳಿ ಸದಸ್ಯ ರವೀಂದ್ರ ಶೆಟ್ಟಿ ಉಳಿದೊಟ್ಟು, ಚಂದ್ರಹಾಸ್ ಪಂಡಿತ್ ಹೌಸ್, ನಗರಸಭೆ ಸದಸ್ಯೆ ಸರಿತಾ ಜೀವನ್ ಕುಮಾರ್, ಜೀವನ್ ಕುಮಾರ್ ತೊಕ್ಕೊಟ್ಟು ಮುಂತಾದವರು ಉಪಸ್ಥಿತರಿದ್ದರು.
