Site icon Ullalavani

ಹೋಮ್‍ವರ್ಕ್ ಮಾಡಿಲ್ಲ ಎಂದು ವಿದ್ಯಾರ್ಥಿನಿಗೆ ಹಲ್ಲೆ: ಶಿಕ್ಷಕಿ ವಿರುದ್ಧ ದೂರು

UN NETWORKS

ಉಳ್ಳಾಲ: ಶಾಲೆಯಲ್ಲಿ ನೀಡಿದ ಹೋಮ್‍ವರ್ಕ್ ಮಾಡಿಲ್ಲ ಎಂದು ಆರೋಪಿಸಿ ಶಾಲಾ ಮುಖ್ಯ ಶಿಕ್ಷಕಿ ವಿದ್ಯಾರ್ಥಿನಿಗೆ ಹೊಡೆದಿದ್ದು, ಗಾಯಗೊಂಡಿರುವ ವಿದ್ಯಾರ್ಥಿನಿಯನ್ನು ತೊಕ್ಕೊಟ್ಟಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಿನ್ಯ ಗ್ರಾಮದ ಅಜ್ಜಿನಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ 4ನೇ ತರಗತಿ ವಿದ್ಯಾರ್ಥಿನಿ ಹೊಡೆತ ತಿಂದು ಗಾಯಗೊಂಡಿರುವ ವಿದ್ಯಾರ್ಥಿನಿಯಾಗಿದ್ದು, ಶಾಲೆಯಲ್ಲಿ ನೀಡಿದ ಹೋಮ್‍ವರ್ಕ್ ಮಾಡಿಲ್ಲ ಎಂದು ಆರೋಪಿಸಿ ಶಾಲಾ ಮುಖ್ಯ ಶಿಕ್ಷಕಿ ಬೆನ್ನಿಗೆ ಮತ್ತು ಕೈಗೆ ಬೆತ್ತದಿಂದ ಹೊಡೆದಿದ್ದು, ಗಾಯಗೊಂಡಿರುವ ವಿದ್ಯಾರ್ಥಿನಿಯ ತಂದೆ ಚೈಲ್ಡ್ ಲೈನ್‍ಗೆ ದೂರು ನೀಡಿದ್ದು, ಚೈಲ್ಡ್ ಲೈನ್‍ನ ಅಧಿಕಾರಿಗಳು ಆಗಮಿಸಿ ವಿದ್ಯಾರ್ಥಿನಿಯಿಂದ ಮಾಹಿತಿ ಪಡೆದು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

Exit mobile version