UN NETWORKS
ಉಳ್ಳಾಲ: ಉಳ್ಳಾಲ ಮಾಸ್ತಿಕಟ್ಟೆ ಬಳಿ ಅಪರಿಚಿತರಿಬ್ಬರು ಯುವಕನೊಬ್ಬನಿಗೆ ಹಲ್ಲೆ ನಡೆಸಿ ಕೊಲೆ ಬೆದರಿಕೆ ಹಾಕಿದ ಘಟನೆ ನಡೆದಿದ್ದು, ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಳ್ಳಾಲ ಅಕ್ಕರೆಕೆರೆ ನಿವಾಸಿ ವೆಂಕಟೇಶ್(34) ಹಲ್ಲೆಗೊಳಗಾದ ಯುವಕನಾಗಿದ್ದು, ಮಾಸ್ತಿಕಟ್ಟೆ ಬಳಿ ಅಂಗಡಿಯೊಂದರ ಬಳಿ ನಿಂತಿದ್ದಾಗ ಇಬ್ಬರು ಆಗಂತುಕರು ಬಂದು ನಿನ್ನ ತಮ್ಮ ನಮ್ಮ ಮೇಲೆ ಕೊಟ್ಟಿರುವ ಪ್ರಕರಣವನ್ನು ವಾಪಾಸ್ ಪಡೆದುಕೊಳ್ಳಬೇಕು ಇಲ್ಲದಿದ್ದಲ್ಲಿ ನಿನ್ನನ್ನು ಕೊಲ್ಲುತ್ತೇನೆ ಎಂದು ಚೂರಿಯನ್ನು ಎದೆಗೆ ಇಟ್ಟು ಬಳಿಕ ಹಲ್ಲೆ ನಡೆಸಿದ್ದು, ಈ ಸಂದರ್ಭದಲ್ಲಿ ಸ್ಥಳೀಯರು ಸಹಾಯಕ್ಕೆ ಆಗಮಿಸಿದಾಗ ಆರೋಪಿಗಳಿಬ್ಬರು ಪರಾರಿಯಾಗಿದ್ದಾರೆ. ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


