UN NETWORKS
ಕೈರಂಗಳ: ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣವನ್ನು ಬೆಳೆಸುವಲ್ಲಿ ಶಾಲಾ ಸಂಸತ್ತು ಪೂರಕವಾಗಿದ್ದು, ಶಾಲೆಗೆ ಸಮರ್ಥ ನಾಯಕತ್ವ ನೀಡುವ ಮೂಲಕ ನಮ್ಮ ಸಂಸತ್ತು ಆದರ್ಶ ಮೆರೆಯಲಿ ಹಾಗೂ ಭವಿಷ್ಯದಲ್ಲಿ ವಿದ್ಯಾರ್ಥಿಗಳು ಬಹುದೊಡ್ಡ ಸ್ಥಾನಗಳನ್ನು ಅಲಂಕರಿಸುವಂತಾಗಬೇಕು ಎಂದು ಸಂಸ್ಥೆಯ ಸಂಚಾಲಕ ಟಿ.ಜಿ.ರಾಜಾರಾಮ ಭಟ್ ಅಭಿಪ್ರಾಯಪಟ್ಟರು.
ಪ್ರಾಂಶುಪಾಲೆ ದಿವ್ಯದೀಪ ವಿದ್ಯಾರ್ಥಿ ಸಂಸತ್ತಿಗೆ ಆಯ್ಕೆಯಾದ 13 ವಿದ್ಯಾರ್ಥಿಗಳಿಗೆ ಪ್ರಮಾಣವಚನ ಬೋಧಿಸಿದರು. ಸಹಶಿಕ್ಷಕ ಶ್ರೀನಿವಾಸ ಭಟ್ ಸೇರಾಜೆ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಉಪಪ್ರಾಂಶುಪಾಲ ಸೋಮಶೇಖರ ಎಂ.ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಕುಮಾರಿ ಚೈತನ್ಯ ಸ್ವಾಗತಿಸಿ, ಅಮೃತ ಕಾರ್ಯಕ್ರಮ ನಿರೂಪಿಸಿದರು. ಸ್ನೇಹ ವಂದಿಸಿದರು.