ಮುಡಿಪು: ಬಂಟ್ವಾಳ ತಾಲೂಕಿನ ಕುರ್ನಾಡು ಗ್ರಾಮದ ಮುಡಿಪು-ಬೋಳಿಯಾರು ರಸ್ತೆಯ ಮಿತ್ತಕೋಡಿ ಬಳಿ ಗುರುವಾರ ಸಂಜೆ ಕಾರು ಹಾಗೂ ಈಚರ್ ಲಾರಿಯ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಚಿಂತಾಜನಕ ಸ್ಥಿತಿಯಲ್ಲಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದ ಮೊಯ್ಯದ್ದಿನ್ ಕಡಬ ಅವರ ಹತ್ತು ವರ್ಷದ ಪುತ್ರ ಮೊಹಮ್ಮದ್ ಮುಝಮ್ಮಿಲ್ ಶುಕ್ರವಾರ ಮಧ್ಯರಾತ್ರಿ ಸಾವನ್ನಪ್ಪಿದ್ದಾರೆ.
ಗುರುವಾರ ರಾತ್ರಿ ಚಿಂತಾಜನಕ ಸ್ಥಿತಿಯಲ್ಲಿದ್ದ ಅವರನ್ನು ಮಂಗಳೂರಿನ ಇಂಡಿಯಾನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮೃತ ವಿದ್ಯಾರ್ಥಿ ದೇರಳಕಟ್ಟೆ ಪಬ್ಲಿಕ್ ಸ್ಕೂಲ್ ನ 4ನೇ ತರಗತಿ ವಿದ್ಯಾರ್ಥಿ. ಅಪಘಾತದಲ್ಲಿ ಕಾರು ಚಾಲಕ ಕಮಲುದ್ದಿನ್ ಗುರುವಾರ ತಡರಾತ್ರಿ ಸಾವನ್ನಪ್ಪಿದ್ದರು. ಅಪಘಾತದಲ್ಲಿ ಗಾಯಗೊಂಡು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕುಟುಂಬದ ಇತರ ಸದಸ್ಯರು ಆಸ್ಪತ್ರೆಯಿಂದ ಇಂದು ಮನೆಗೆ ತೆರಳಲಿದ್ದಾರೆ.