UN NETWORKS
ಗಾಂಧಿನಗರ:ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ ಬೆಳೆಸಿಕೊಳ್ಳಲು ವಿದ್ಯಾರ್ಥಿ ಸಂಘಗಳು ಪೂರಕವಾಗಿದ್ದು, ಸಂಘಟನಾತ್ಮಕವಾಗಿ ಕಾಲೇಜಿನ ಅಭಿವೃದ್ಧಿಯಲ್ಲಿ ವಿದ್ಯಾರ್ಥಿಗಳು ತೊಡಗಿಸಿಕೊಳ್ಳ ಬೇಕು ಎಂದು ಮಂಗಳೂರಿನ ಶ್ರೀ ಗೋಕರ್ಣನಾಥೇಶ್ವರ ಶಿಕ್ಷಣ ಸಮೂಹ ಸಂಸ್ಥೆಯ ಸಂಚಾಲಕ ಜಯವಿಕ್ರಮ ಅಭಿಪ್ರಾಯಪಟ್ಟರು.
ಮಂಗಳೂರು ಗಾಂಧಿನಗರದ ಶ್ರೀ ಗೋಕರ್ಣನಾಥೇಶ್ವರ ಶಿಕ್ಷಣ ಮಹಾವಿದ್ಯಾಲಯ ಮಂಗಳೂರು ಇಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ ಹಾಗೂ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಚಾಲನೆ ನೀಡಿ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲ ಉದಯ ಕುಮಾರ್ ಬಿ. ಇವರು ವಿದ್ಯಾರ್ಥಿ ನಾಯಕ, ಉಪನಾಯಕ ಹಾಗೂ ಸಂಘದ ಎಲ್ಲಾ ಪದಾಧಿಕಾರಿಗಳಿಗೂ ಪ್ರಮಾಣವಚನ ಬೋಧಿಸಿದರು. ವೇದಿಕೆಯಲ್ಲಿ ವಿದ್ಯಾರ್ಥಿ ನಾಯಕ ರಾಕೇಶ್, ಉಪನಾಯಕ ಈರಪ್ಪ ಉಪಸ್ಥಿತರಿದ್ದರು.
ಉಪನ್ಯಾಸಕಿ ಮಲ್ಲಿಕಾ ಸ್ವಾಗತಿಸಿದರು. ವಿದ್ಯಾರ್ಥಿಗಳಾದ ಅರ್ಚನಾ ವಂದಿಸಿದರು.ಅಕ್ಷತಾ ಕಾರ್ಯಕ್ರಮ ನಿರ್ವಹಿಸಿದರು.


