Site icon Ullalavani

ಎನ್‍ಎಸ್‍ಎಸ್‍ ನಿಂದ ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣಗಳೊಂದಿಗೆ ಸೇವಾ ಮನೋಭಾವ ಹೆಚ್ಚಿಸಲು ಸಾಧ್ಯ:ಡಾ|ನವೀನ್ 

UN NETWORKS

ಗಾಂಧಿನಗರ: ರಾಷ್ಟ್ರೀಯ ಸೇವಾ ಯೋಜನೆಯಿಂದ ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣಗಳೊಂದಿಗೆ ಸೇವಾ ಮನೋಭಾವ ಹೆಚ್ಚಿಸಲು ಸಾಧ್ಯ ಎಂದು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಇತಿಹಾಸ ವಿಭಾಗದ ಸಹ ಪ್ರಾಧ್ಯಾಪಕ ಡಾ| ನವೀನ್ ಎನ್. ಕೊಣಾಜೆ ಅಭಿಪ್ರಾಯಪಟ್ಟರು.

ಗಾಂಧಿನಗರದ ಶ್ರೀ ಗೋಕರ್ಣನಾಥೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯ ಚಟುವಟಿಕೆಗೆ ಚಾಲನೆ ನೀಡಿ ಮಾತನಾಡಿದರು.ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಎನ್‍ಎಸ್‍ಎಸ್‍ನಂತಹ ಚಟುವಟಿಕೆಗಳಿಂದ ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವದೊಂದಿಗೆ ಸಾಮರಸ್ಯದ ಬದುಕು ಸಾಧ್ಯವಾಗುತ್ತದೆ ಎಂದ ಅವರು ಗುಜರಾತ್‍ನಲ್ಲಿ ನಡೆದ ಭೂಕಂಪ, ಲಾಖಡಿಯೊದಲ್ಲಿ ಹಾಗೂ ಅಂಡಮಾನ್ ನಿಕೋಬಾರ್ ನಲ್ಲಿ ಸುನಾಮಿ ಬಂದಾಗ ಎನ್.ಎಸ್.ಎಸ್ ವಿದ್ಯಾರ್ಥಿಗಳು ನಡೆಸಿದ್ದ ಕಾರ್ಯ ಚಟುವಟಿಕೆಗಳ ಬಗ್ಗೆ ತಿಳಿಸಿದರು.

ಕಾಲೇಜಿನ ಪ್ರಾಂಶುಪಾಲೆ ಕ್ಷಮಾ ಎನ್.ರಾವ್ ಅಧ್ಯಕ್ಷತೆಯನ್ನು ವಹಿಸಿದ್ದರು. ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜನಾಧಿಕಾರಿ ಇತಿಹಾಸ ವಿಭಾಗದ ಬಾಲಚಂದ್ರ ಸ್ವಾಗತಿಸಿದರು. ವಿದ್ಯಾರ್ಥಿನಿ ಪೂಜಾ ಕಾರ್ಯಕ್ರಮ ನಿರೂಪಿಸಿದರು. ಕಾವ್ಯ ವಂದಿಸಿದರು. ಎನ್.ಎಸ್.ಎಸ್ ನಾಯಕ್ ಜಯೇಶ್ ಉಪಸ್ಥಿತರಿದ್ದರು.

Exit mobile version