Site icon Ullalavani

ಸೋಮೇಶ್ವರ ದೇವಸ್ಥಾನದ ಪರಿಸರದಲ್ಲಿ ಸ್ವಚ್ಚತಾ ಕಾರ್ಯಕ್ರಮ ಮತ್ತು ಗಿಡ ನೆಡುವ ಕಾರ್ಯಕ್ರಮ

UN NETWORKS

ಉಳ್ಳಾಲ: ಕೇಸರಿ ಮಿತ್ರ ವೃಂದ ಸೇವಾ ಟ್ರಸ್ಟ್ ಕುಂಪಲ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಸೋಮೇಶ್ವರ ಗ್ರಾಮ ಪಂಚಾಯತ್ ಇದರ ಸಹಯೋಗದಲ್ಲಿ ನಮ್ಮ ತ್ಯಾಜ್ಯ ನಮ್ಮ ಹೊಣೆ ಕಾರ್ಯಕ್ರಮದಡಿಯಲ್ಲಿ ಸೋಮೇಶ್ವರ ದೇವಸ್ಥಾನದ ಪರಿಸರದಲ್ಲಿ ಸ್ವಚ್ಚತಾ ಕಾರ್ಯಕ್ರಮ ಮತ್ತು ವನಮಹೋತ್ಸವದ ಅಂಗವಾಗಿ ಗಿಡ ನೆಡುವ ಕಾರ್ಯಕ್ರಮ ಆದಿತ್ಯವಾರ ನಡೆಯಿತು.

ಜಿಲ್ಲಾ ಪಂಚಾಯತ್ ನ “ಸ್ವಚ್ಛಭಾರತ್ ಮಿಷನ್” ನ ಜಿಲ್ಲಾ ಸಂಯೋಜಕಿ ಮಂಜುಳಾ, ಜಿಲ್ಲಾ ಪಂಚಾಯತ್ ಸದಸ್ಯರಾದ ಧನಲಕ್ಷ್ಮೀ ಗಟ್ಟಿ , ಸೋಮೇಶ್ವರ ಗ್ರಾಮ ಪಂಚಾಯತ್‍ನ ಅಧ್ಯಕ್ಷರಾದ ರಾಜೇಶ್ ಉಚ್ಚಿಲ ಇವರು ಮಾತಾಡಿ ತ್ಯಾಜ್ಯ ನಿರ್ವಹಣೆಯಲ್ಲಿ ಸರಕಾರದ ವಿವಿಧ ಯೋಜನೆಗಳ ಬಗ್ಗೆ ತಿಳಿಸಿದರು ಮತ್ತು ಗಿಡಗಳನ್ನು ನೆಟ್ಟು ಮುಂದೆಯು ಈ ಗಿಡಗಳ ನಿರ್ವಹಣೆ ಮಾಡುವಂತೆ ಕರೆ ನೀಡಿದರು. ಕೇಸರಿ ಸೇವಾ ಟ್ರಸ್ಟ್ ನ ಟ್ರಸ್ಟಿ ಬಿ. ನಾರಾಯಣ ಮಾತಾಡಿ ಸಹಕರಿಸಿದ ಎಲ್ಲಾರಿಗೂ ಧನ್ಯವಾದವನ್ನು ಅರ್ಪಿಸಿದರು ಅದೇ ರೀತಿ ಗಿಡಕ್ಕೆ ರಕ್ಷಣಾ ಬೇಲಿಯನ್ನು ನೀಡುವುದಾಗಿ ಘೋಷಿಸಿದ ನ್ಯಾಯವಾದಿ ರವೀಂದ್ರ ರೈ ಇವರಿಗೂ ಧನ್ಯವಾದವನ್ನು ನೀಡಲಾಯಿತು.

ಈ ಸಂದರ್ಭದಲ್ಲಿ ಸೋಮೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರರಾದ ವಿಶ್ವನಾಥ ಗಟ್ಟಿ ವಗ್ಗ, ಕೇಸರಿ ಸೇವಾ ಟ್ರಸ್ಟ್ ನ ಅಧ್ಯಕ್ಷರದ ನವೀನ್ ಕುಜುಮಗದ್ದೆ, ಎಲ್ಲಾ ಟ್ರಸ್ಟಿಗಳು, ವೃಂದದ ಪದಾ„ಕಾರಿಗಳು, ವೃಂದದ ಸದಸ್ಯರು, ಗ್ರಾಮ ಪಂಚಾಯತ್ ಅಭಿವೃದ್ಧಿ ಅ„ಕಾರಿ, ಗ್ರಾಮ ಪಂಚಾಯತ್ ನೌಕರರು ಜಿಲ್ಲಾ ಪಂಚಾಯತ್ ನೌಕರರು ಉಪಸ್ಥಿತರಿದ್ದು ಸ್ವಚ್ಛತಾ ಮತ್ತು ಗಿಡ ನೆಡುವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Exit mobile version