UN NETWORKS
ಉಳ್ಳಾಲ: ಪದವಿ ಪೂರ್ವ ಶಿಕ್ಷಣ ಇಲಾಖೆ 2017-2018ರ ಶೈಕ್ಷಣಿಕ ಸಾಲಿನಲ್ಲಿ ನಡೆಸಿದ ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಶೇಕಡ 100% ಫಲಿತಾಂಶ ಸಾಧಿಸಿದ ಕೆ.ಸಿ.ರೋಡ್ ವಿದ್ಯಾನಗರದ ಫಲಾಹ್ ಬಾಲಕಿಯರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರಿಗೆ ಹಾಗೂ ಪ್ರಾಂಶುಪಾಲರಿಗೆ ಮತ್ತು ಉಪನ್ಯಾಸಕರಿಗೆ ಆಡಳಿತ ಮಂಡಳಿ ಫಲಾಹ್ ಎಜ್ಯುಕೇಶನ್ ಸೊಸೈಟಿ ವತಿಯಿಂದ ಅಭಿನಂದನಾ ಸಮಾರಂಭ ನಡೆಯಿತು.
ಫಲಾಹ್ ಎಜ್ಯುಕೇಶನ್ ಸೊಸೈಟಿಯ ಅಧ್ಯಕ್ಷ ಯು.ಬಿ.ಮುಹಮ್ಮದ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಸಂಸ್ಥೆಯ ಪ್ರಾಂಶುಪಾಲ ಅಬ್ದುಲ್ ಖಾದರ್ ಹುಸೈನ್ ಪ್ರಾಸ್ತವಿಕವಾಗಿ ಮಾತನಾಡಿದರು. ಸಂಸ್ಥೆಯ ಕೋಶಾಧಿಕಾರಿ ಇಸ್ಮಾಯಿಲ್ ನಾಗತೋಟ, ಸದಸ್ಯ ಅಬ್ಬಾಸ್ ಉಚ್ಚಿಲ್, ಕನ್ನಡ ಅನುದಾನಿತ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಮೊಹಮ್ಮದ್ ರಫೀಕ್, ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯಶಿಕ್ಷಕಿ ಆಯಿಶ ಸಬೀನ ಕೈಸೀರನ್, ಉಪಾಧ್ಯಕ್ಷ ಟಿ.ಎಂ.ಅಬ್ಬಾಸ್, ಕಾರ್ಯದರ್ಶಿ ಟಿ.ಎಂ.ಬಶೀರ್, ಮಾಜಿ ಅಧ್ಯಕ್ಷ ಅಬ್ಬಾಸ್ ಮಜಲ್, ಕಾಲೇಜು ನಾಯಕಿ ಫಮೀಝ, ಉಪನಾಯಕಿ ಝುನೈರ ಉಪಸ್ಥಿತರಿದ್ದರು.
ಕಾಲೇಜಿನ ವಿದ್ಯಾರ್ಥಿನಿಯರಿಗೆ ಉಚಿತ ಸ್ಪೋಕನ್ ಇಂಗ್ಲೀಷ್ ತರಗತಿಯ ಉದ್ಘಾಟನೆ ಹಾಗೂ ಹಳೆ ವಿದ್ಯಾರ್ಥಿ ಸಂಘದ ಉದ್ಘಾಟನೆಯನ್ನು ಮಾಡಲಾಯಿತು.ಉಪನ್ಯಾಸಕಿ ಜೀವಿತಾ ಶೆಟ್ಟಿ ಸ್ವಾಗತಿಸಿ, ಸ್ಯಾಂಡ್ರ ಡಿ’ಸೋಝ ವಂದಿಸಿದರು. ಉಪನ್ಯಾಸಕಿ ಕುಸುಮ ಕಾರ್ಯಕ್ರಮವನ್ನು ನಿರೂಪಿಸಿದರು.


