UN NETWORKS
ತಲಪಾಡಿ: ವಿದ್ಯಾರ್ಥಿ ಜೀವನದಲ್ಲಿ ನಾಯಕತ್ವ ಗುಣವನ್ನು ಬೆಳೆಸಿಕೊಳ್ಳುವುದರೊಂದಿಗೆ ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗೆ ಇಂತಹ ಕಾರ್ಯಕ್ರಮಗಳು ಪೂರಕ ಎಂದು ಮಹೇಶ್ ಪದವಿ ಪೂರ್ವ ಕಾಲೇಜಿನ ಸಸ್ಯಶಾಸ್ರ ವಿಭಾಗದ ಉಪನ್ಯಾಸಕಿ ಚೇತನಾ ಅಜಿತ್ ಕುಮಾರ್ ಅಭಿಪ್ರಾಯಪಟ್ಟರು. ’
ತಲಪಾಡಿ ದೇವಿನಗರದ ಶಾರದಾ ವಿದ್ಯಾನಿಕೇತನ ಪಬ್ಲಿಕ್ ಸ್ಕೂಲ್ನಲ್ಲಿ ಶಾಲಾ ಪರಿಷತ್ ಉದ್ಘಾಟನಾ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. ಶಾರದಾ ವಿದ್ಯಾನಿಕೇತನ ಪಬ್ಲಿಕ್ ಸ್ಕೂಲ್ ನ ಪ್ರಾಂಶುಪಾಲೆ ಸುಷ್ಮಾ ದಿನಕರ್ ಮಾತನಾಡಿ ಶಾಲಾ ವಿದ್ಯಾರ್ಥಿ ನಾಯಕರು ಶಾಲೆಯ ನಿಯಮಗಳನ್ನು ಪಾಲಿಸುವುದರೊಂದಿಗೆ ತಮ್ಮ ಕಿರಿಯ ವಿದ್ಯಾರ್ಥಿಗಳಿಗೆ ಮಾದರಿಯಾಗಿ ಮಾರ್ಗದರ್ಶನವನ್ನು ನೀಡುವ ಕಾರ್ಯವನ್ನು ಮಾಡಬೇಕು.
ಶಾರಾದಾ ವಿದ್ಯಾನಿಕೇತನ ಡೇ ಸ್ಕೂಲ್ ನ ಪ್ರಾಂಶುಪಾಲೆ ಲತಾಂಜಲಿ ರೈ ವಿದ್ಯಾರ್ಥಿ ಪರಿಷತ್ನ ಸದಸ್ಯರಿಗೆ ಪ್ರಮಾಣ ವಚನ ಬೋಧಿಸಿದರು. ವಿದ್ಯಾನಿಕೇತನ ಪಬ್ಲಿಕ್ ಸ್ಕೂಲ್ ವಸತಿ ಶಾಲೆಯ ಉಪ ಪ್ರಾಂಶುಪಾಲ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ವಿನಾಯಕ್ ಬಿ.ಜಿ. ಉಪಸ್ಥಿತರಿದ್ದರು.ವಿದ್ಯಾರ್ಥಿಗಳಾದ ವೈಷ್ಣವಿ ಸ್ವಾಗತಿಸಿದರು. ಲಕ್ಷ್ಮಿಬೋಳಾರ್ ಕಾರ್ಯಕ್ರಮ ನಿರೂಪಿಸಿದರು. ಯುಕ್ತಾ ಭಾಗವತ್ ವಂದಿಸಿದರು.


