UN NETWORKS
ಉಳ್ಳಾಲ: ಉಪ್ಪಳ ನಯಾಬಜಾರ್‍ನಲ್ಲಿ ಅಪಘಾತದಲ್ಲಿ ಗಂಭೀರ ಗಾಯಗೊಂಡು ಮಂಗಳೂರಿನ ಆಸ್ಪತ್ರೆಯಲ್ಲಿ ತೀವ್ರ ನಿಗಾದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಫಾತಿಮಾ(1ವ.) ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ರಾತ್ರಿ ಮೃತಪಟ್ಟಿದೆ.
ಕೇರಳದ ಪಾಲ್ಘಾಟ್‍ನಲ್ಲಿ ಗೃಹ ಪ್ರವೇಶ ಕಾರ್ಯಕ್ರಮದಲ್ಲಿ ಭಾಗವಹಿಸಿ ವಾಪಸಾಗುತ್ತಿದ್ದ ಕೆ.ಸಿರೋಡ್ ಅಜ್ಜಿನಡ್ಕದ ಭೀಪಾತುಮ್ಮ ಸೇರಿದಂತೆ ಐವರು ಸ್ಥಳದಲ್ಲೇ ಮೃತಪಟ್ಟು 13 ಮಂದಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು, ಭೀಫಾತುಮ್ಮ ಅವರ ಪುತ್ರಿ ನಸೀಮಾ ಈ ಅಪಘಾತದಲ್ಲಿ ಮೃತಪಟ್ಟಿದ್ದು, ನಸೀಮಾ ಅವರ ಒಂದು ವರ್ಷದ ಪುತ್ರಿ ಫಾತಿಮಾ ಚಿಕಿತ್ಸೆ ಫಲಕಾರಿಯಾಗದೆ ಮೃತಪಡುವ ಮೂಲಕ ಘಟನೆಯಲ್ಲಿ ಮೃತಪಟ್ಟವರ ಸಂಖ್ಯ 6ಕ್ಕೇರಿದಂತಾಗಿದೆ.
ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳಲ್ಲಿ ಫವಾಝ್ ಸ್ಥಿತಿ ಗಂಭೀರವಾಗಿದ್ದು, ಗಂಭೀರ ಸ್ಥಿತಿಯಲ್ಲಿದ್ದ ಸೌದಾ, ಮಕ್ಕಳದಾ ಫಾರಿಷ್, ಶಾಹಿದ್ ಚೇತರಿಸುತ್ತಿದ್ದು ಉಳಿದ ಗಾಯಾಳುಗಳು ಅಪಾಯದಿಂದ ಪಾರಾಗಿದ್ದಾರೆ.


