UN NETWORKS
ಉಳ್ಳಾಲ: ಉಳ್ಳಾಲ ರೈಲ್ವೇ ನಿಲ್ದಾಣದಲ್ಲಿರುವ 125 ವರ್ಷಗಳ ಹಳೇಯದಾದ ಕಟ್ಟಡದ ಮೇಲ್ಛಾವಣಿ ಸಂಪೂರ್ಣವಾಗಿ ಕುಸಿದುಬಿದ್ದಿರುವ ಘಟನೆ ಶುಕ್ರವಾರ ಮಧ್ಯಾಹ್ನ ವೇಳೆ ಸಂಭವಿಸಿದೆ.
ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದ್ದು, ಅವರು ಸ್ಥಳಕ್ಕೆ ಇಂದು ಭೇಟಿ ನೀಡಲಿದ್ದಾರೆ ಎಂದು ಉಳ್ಳಾಲದಲ್ಲಿರುವ ಅಧಿಕೃತರು ತಿಳಿಸಿದ್ದಾರೆ. ಬ್ರಿಟೀಷರ ಕಾಲದಲ್ಲಿ ನಿರ್ಮಿಸಲಾದ ಉಳ್ಳಾಲ ರೈಲ್ವೇ ನಿಲ್ದಾಣದ ಕಟ್ಟಡ ಇದಾಗಿದ್ದು, ಸುಮಾರು 125 ವರ್ಷಗಳು ಕಳೆದಿರಬಹುದು. ಕೆಲ ವರ್ಷಗಳ ಹಿಂದೆ ನೂತನ ಕಟ್ಟಡ ನಿರ್ಮಿಸಿದ ಬಳಿಕ ಸ್ಟೇಷನ್ ಮಾಸ್ಟರ್ ಕಚೇರಿ ಮತ್ತು ನಿಯಂತ್ರಣ ಕೊಠಡಿಯನ್ನು ನೂತನ ಕಟ್ಟಡಕ್ಕೆ ಸ್ಥಳಾಂತರಿಸಲಾಗಿತ್ತು. ಆದರೂ ಪಾಳುಬಿದ್ದ ಕಟ್ಟಡವನ್ನು ರೈಲ್ವೇ ಇಲಾಖೆಯವರು ನೆಲಸಮಗೊಳಿಸಬೇಕಿತ್ತು ಅನ್ನುವುದು ಪ್ರಯಾಣಿಕರ ಆರೋಪವಾಗಿದೆ.