UN NETWORKS
ಉಳ್ಳಾಲ: ವಿವಿಧ ಪ್ರಕರಣಗಳಲ್ಲಿ ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯೋರ್ವನನ್ನು ಉಳ್ಳಾಲ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಉಳ್ಳಾಲ ಧರ್ಮನಗರದ ಬೊಟ್ಟು ನಿವಾಸಿ ಮುಖ್ತಾರ್(24) ಬಂಧಿತ ಆರೋಪಿ. ಈತನ ವಿರುದ್ಧ ಉಳ್ಳಾಲ ಮತ್ತು ಬರ್ಕೆ ಠಾಣೆಯಲ್ಲಿ ಕೊಲೆ ಯತ್ನ, ಹಲ್ಲೆ ಸೇರಿದಂತೆ ವಿವಿಧ ಪ್ರಕರಣ ದಾಖಲಾಗಿತ್ತು. ಈ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ನ್ಯಾಯಾಲಯದಿಂದ ನಾಲ್ಕು ಬಾರಿ ವಾರಂಟ್ ಜಾರಿಯಾಗಿತ್ತು. ಆದರೆ ಆರೋಪಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದನೆನ್ನಲಾಗಿದೆ.
ಆರೋಪಿಯನ್ನು ಶನಿವಾರ ಉಳ್ಳಾಲ ಧರ್ಮನಗರ ಪರಿಸರದಿಂದ ಬಂಧಿಸಿರುವ ಉಳ್ಳಾಲ ಠಾಣಾ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.


