UN NETWORKS
ಕೊಣಾಜೆ : ಮಕ್ಕಳಿಗೆ ಬಾಲ್ಯದಲ್ಲಿ ವಿದ್ಯೆಯ ಜೊತೆ ಸಂಸ್ಕಾರ, ಸಂಸ್ಕೃತಿಯನ್ನು ಬೆಳೆಸಬೇಕು, ಇದು ಮಗುವಿನ ಸರ್ವತೋಮಖ ಬೆಳವಣಿಗೆಗೆ ಕಾರಣವಾಗುತ್ತದೆ ಎಂದು ಜಿಲ್ಲಾ ಪಂಚಾಯತ್ ಸದಸ್ಯ ಧನಲಕ್ಷಿ ಗಟ್ಟಿ ಅಭಿಪ್ರಾಯಪಟ್ಟರು.
ವಿಶ್ವಮಂಗಳ ವಿದ್ಯಾಸಂಸ್ಥೆಯ ಸಭಾಭವನದಲ್ಲಿ ಶಾಲಾ ರಕ್ಷಕ – ಶಿಕ್ಷಕ ಸಂಘದ ವಾರ್ಷಿಕ ಮಹಾಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.
ವಿದ್ಯಾಸಂಸ್ಥೆಯ ಅಧ್ಯಕ್ಷ ಪ್ರೊ| ಇಸ್ಮಾಯಿಲ್ ಅವರು ಸಭೆಯ ಅಧ್ಯಕ್ಷ ಸ್ಥಾನದಿಂದ ಮಾತನಾಡುತ್ತ, “ವಿಶ್ವಮಂಗಳ ಶಾಲೆಯ ವಿದ್ಯಾರ್ಥಿಗಳಿಗೆ ಬೇಕಾದ ಆದಷ್ಟುಹೆಚ್ಚಿನ ಸೌಕರ್ಯಗಳನ್ನು ಒದಗಿಸಿದೆ. ವಿದ್ಯಾರ್ಥಿಗಳು ಶಿಕ್ಷಕರಿಗೆ ಹಾಗೂ ಹೆತ್ತವರಿಗೆ ಗೌರವವನ್ನು ನೀಡಿ ಒಳ್ಳೆಯ ಶಿಕ್ಷಣವನ್ನು ಪಡೆಯಬೇಕು“ ಎಂದು ಹೇಳಿದರು.
ವಿದ್ಯಾಸಂಸ್ಥೆಯ ಕಾರ್ಯದರ್ಶಿಗಳಾದ ಪ್ರೊ| ಭೋಜ ಪೂಜಾರಿ, ಖಜಾಂಚಿಗಳಾದ ಡಾ| ಪರಮೇಶ್ವರ್, ರಕ್ಷಕ -ಶಿಕ್ಷಕ ಸಂಘದ ಅಧ್ಯಕ್ಷ ಪ್ರೊ|. ಶಿವಣ್ಣ, ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯಸ್ಥೆ ಅಂತು ಡಿ’ಸೋಜಾ ಉಪಸ್ಥಿತರಿದ್ದರು. ಹಿರಿಯ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯಿನಿ ಶೋಭಾವತಿ ಸ್ವಾಗತಿಸಿದರು. ಪ್ರೌಢ ಶಾಲೆಯ ದೈಹಿಕ ಶಿಕ್ಷಕ ದಿಲೀಪ್ ಕುಮಾರ್ ರೈ ಕಾರ್ಯಕ್ರಮ ನಿರೂಪಿಸಿದರು. ಪ್ರೌಢಶಾಲೆಯ ಮುಖ್ಯೋಪಾಧ್ಯಾಯಿನಿ ಪ್ರಿಯಾ ಎನ್. ವಂದಿಸಿದರು.


