UN NETWORKS
ಮುಡಿಪು: ವಿದ್ಯಾರ್ಥಿ ಜೀವನದಲ್ಲಿ ಉತ್ತಮ ರೀತಿ ಸಂಸ್ಕಾರ ಬೆಳಸಿಕೊಂಡು ಬಂದರೆ ನಮ್ಮ ಜೀವನದಲ್ಲಿ ಯಶಸ್ಸು ಸಾಧ್ಯ. ವಿಧ್ಯಾರ್ಥಿಗಳು ಶಾಲಾ ದಿನಗಳಲ್ಲಿ ವಿದ್ಯಾರ್ಥಿ ಪರಿಷತ್ಗಳಲ್ಲಿ ತೊಡಗಿಸಿಕೊಂಡರೆ ನಾಯಕತ್ವ ಗುಣ ಬೆಳೆಯಲು ಸಾಧ್ಯ ಎಂದು ದ.ಕ ಪೋಲಿಸ್ ವರಿಷ್ಠಾಧಿಕಾರಿ ಡಾ| ಬಿ.ಆರ್ ರವಿಕಾಂತ್ ಗೌಡ ಅಭಿಪ್ರಾಯಪಟ್ಟರು.
ಬಂಟ್ವಾಳ ತಾಲೂಕಿನ ಮುಡಿಪುವಿನ ಸೂರಜ್ ಸಮೂಹ ವಿದ್ಯಾ ಸಂಸ್ಥೆಯ ಶೈಕ್ಷಣಿಕ ಸಾಲಿನ ವಿದ್ಯಾರ್ಥಿ ಪರಿಷತ್ಗೆ ಚಾಲನೆ ನೀಡಿ ಮಾತನಾಡಿದರು. ಸೂರಜ್ ವಿದ್ಯಾ ಸಂಸ್ಥೆಯ ಅಧ್ಯಕ್ಷ ಡಾ| ಮಂಜುನಾಥ್ ಎಸ್. ರೇವಣ್ಕರ್ ಕಾರ್ಯಕ್ರಮ ಅಧ್ಯಕ್ಷತೆ ವಹಿಸಿ ಮಾತನಾಡಿ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾದರು ಎಂಬ ಉದ್ದೇಶದಿಂದ 13 ವಿದ್ಯಾರ್ಥಿಗಳಿಂದ ಪ್ರಾರಂಭಿಸಿದ ಸಂಸ್ಥೆ ಇಂದು 900 ವಿದ್ಯಾರ್ಥಿಗಳು ವಿದ್ಯಾಭ್ಯಾಸ ಪಡೆಯುತ್ತಿದ್ದಾರೆ. ಎಲ್ಲರ ಸಹಕಾರ ದಿಂದ ಸಂಸ್ಥೆ ದಿನದಿಂದ ದಿನಕ್ಕೆ ಬೆಳೆಯುತ್ತಿದೆ ಎಂದು ಹೇಳಿದರು.
ವಿದ್ಯಾರ್ಥಿ ಪರಿಷತ್ ನೂತನ ತಂಡಗಳ ಗುರುತಿನ ಗೌರವದ ಧ್ವಜವನ್ನು ತಂಡದ ನಾಯಕರಿಗೆ ಹಸ್ತಾಂತರಿಸಲಾಯಿತು.
ಕಾರ್ಯಕ್ರಮದಲ್ಲಿ ಪೋಲಿಸ್ ವರಿಷ್ಠಾಧಿಕಾರಿ ಡಾ| ಬಿ.ಆರ್. ರವಿಕಾಂತ್ ಗೌಡರವರನ್ನು ಸೂರಜ್ ಸಮೂಹ ಸಂಸ್ಥೆ ವತಿಯಿಂದ ಸನ್ಮಾನಿಸಲಾಯಿತು.ಶಾಲಾ ಮುಖ್ಯ ಶಿಕ್ಷಕಿ ವಿಮಲಾ ಶೆಟ್ಟಿ ಸ್ವಾಗತಿಸಿದರು. ಶಿಕ್ಷಕ ಅಶೋಕ್ ಎಸ್. ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕಿ ದಿವ್ಯ ವಂದಿಸಿದರು.


