UN NETWORKS
ಕೊಣಾಜೆ : ರಾಷ್ಟ್ರೀಯ ಸೇವಾ ಯೋಜನೆಯು ವಿದ್ಯಾರ್ಥಿಗಳಲ್ಲಿ ಉತ್ತಮ ಶಿಸ್ತನ್ನು ಬೆಳೆಸುವುದರೊಂದಿಗೆ ಉತ್ತಮ ಪ್ರಜೆಯನ್ನಾಗಿ ರೂಪಿಸುವುದರಲ್ಲಿ ಪ್ರಮುಖ ಪಾತ್ರವಹಿಸುತ್ತದೆ. ಆದ್ದರಿಂದ ವಿದ್ಯಾರ್ಥಿಗಳು ವಿದ್ಯೆಯೊಂದಿಗೆ ಇಂತಹ ರಾಷ್ಟ್ರೀಯ ಸೇವಾ ಯೋಜನೆಯ ಶಿಬಿರಗಳಲ್ಲಿ ಹೆಚ್ಚೆಚ್ಚು ತೊಡಗಿಸಿಕೊಂಡು ಉತ್ತಮ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕು ಎಂದು ಮಂಗಳೂರು ವಿಶ್ವವಿದ್ಯಾಲಯದ ಕುಲಸಚಿವ ಪ್ರೊ.ನಾಗೇಂದ್ರ ಪ್ರಕಾಶ್ ಅವರು ಹೇಳಿದರು.
ಮಂಗಳೂರು ವಿಶ್ವವಿದ್ಯಾಲಯವು ಈಗಾಗಲೇ ಪರಿಸರಕ್ಕೆ ಪೂರಕವಾದ ವನಮಹೋತ್ಸವ, ಪ್ಲಾಸ್ಟಿಕ್ ಮುಕ್ತ ಸಮಾಜದಂತಹ ಹಲವಾರಯ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಇಂತಹ ಕಾರ್ಯಕ್ರಮಗಳಿಗೆ ರಾಷ್ಟ್ರೀಯ ಸೇವಾ ಯೋಜನೆಯ ವಿದ್ಯಾರ್ಥಿಗಳ ಸಹಕಾರವೂ ಅಗತ್ಯ ಎಂದರು. ಅಲ್ಲದೆ ಶಿಬಿರದಲ್ಲಿ ಭಾಗವಹಿಸುತ್ತಿರುವ ವಿದ್ಯಾರ್ಥಿಗಳಿಗೆ ವಿವಿ ವತಿಯಿಂದ ಎಲ್ಲಾ ಸೌಲಭ್ಯಗಳನ್ನು ನೀಡಲಾಗುವುದು ಎಂದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ದಕ್ಷಿಣ ಕನ್ನಡ ಸ್ವಚ್ಚ ಭಾರತ್ ಮಿಷನ್‍ನ ಸಂಯೋಜಕರಾದ ಮಂಜುಳಾ ಅವರು ಮಾತನಾಡಿ, ಎನ್‍ಎಸ್‍ಎಸ್ ನಂತಹ ಯೋಜನೆಗಳು ನಮಗೆ ಜೀವನದಲ್ಲಿ ಅಗತ್ಯವಾಗಿರುವಂತಹ ಸೇವಾ ಮನೋಭಾವನೆ, ಶಿಸ್ತು, ಮಾನವೀಯ ಮೌಲ್ಯಗಳನ್ನು ಬೆಳೆಸುವಲ್ಲಿ ಸಹಕಾರಿಯಾಗುತ್ತದೆ ಎಂದರು.
ಕೊಣಾಜೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶೌಕತ್ ಆಲಿ ಅವರು ಮಾತನಾಡಿ, ಮಂಗಳೂರು ವಿಶ್ವವಿದ್ಯಾನಿಲಯವು ಕೊಣಾಜೆ ಗ್ರಾಮದಲ್ಲಿರುವುದು ನಮಗೆಲ್ಲರಿಗೂ ಹೆಮ್ಮೆಯಾಗಿದ್ದು, ವಿವಿ ಹಾಗೂ ಕೊಣಾಜೆ ಗ್ರಾಮ ಪಂಚಾಯಿತಿ ಸಹಕಾರದೊಂದಿಗೆ ಈಗಾಗಲೇ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಗ್ರಾಮ ಅಭಿವೃದ್ಧಿಗಾಗಿ ವಿವಿಯಿಂದಲೂ ಸಹಕಾರ ಅಗತ್ಯವಾಗಿದೆ ಎಂದರು.
ಸಮಾರಂಭದ ಅಧ್ಯಕ್ಷತೆಯನ್ನು ಮಂಗಳೂರು ವಿವಿಯ ಪ್ರಾಧ್ಯಾಪಕರಾದ ಡಾ.ಮೋಹನ್ ಸಿಂಘೆ ಅವರು ವಹಿಸಿದ್ದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಕೊಣಾಜೆ ಮಂಗಳಾ ಸೇವಾ ಟ್ರಸ್ಟ್‍ನ ನಿರ್ದೇಶಕರಾದ ಅಬ್ದುಲ್ ನಾಸೀರ್ ಕೆ.ಕೆ., ಕೊಣಾಜೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರಾದ ಅಚ್ಯುತಗಟ್ಟಿ ಮೊದಲಾದವರು ಉಪಸ್ಥಿತರಿದ್ದರು.
ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜನಾಧಿಕಾರಿ ಪ್ರೊ.ವಿನಿತಾ ಕೆ ಅವರು ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ಆಯ್ಕೆ ಶಿಬಿರದಲ್ಲಿ ಮಂಗಳೂರು ವಿವಿ ವ್ಯಾಪ್ತಿಯ ವಿವಿಧ ಕಾಲೇಜುಗಳ ಸುಮಾರು 350 ವಿದ್ಯಾರ್ಥಿಗಳು ಭಾಗವಹಿಸಿದ್ದಾರೆ.