Site icon Ullalavani

ಶಿರೂರು ಮಠದ ಲಕ್ಷ್ಮೀವರತೀರ್ಥ ಸ್ವಾಮೀಜಿ ವಿಧಿವಶ

UN NETWORKS

ಉಡುಪಿ: ಶಿರೂರು ಮಠದ ಶ್ರೀಲಕ್ಷ್ಮೀವರ ತೀರ್ಥ ಸ್ವಾಮೀಜಿ ಗುರುವಾರ ಬೆಳಗ್ಗೆ ಮಣಿಪಾಲದ ಕೆಎಂಸಿ ಆಸ್ರತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 65 ವರ್ಷ ವಯಸ್ಸಾಗಿತ್ತು.

ಅನಾರೋಗ್ಯದ ಹಿನ್ನೆಲೆಯಲ್ಲಿ ಬುಧವಾರ ಬೆಳಗ್ಗೆ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಾಗಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ ಕೊನೆಯುಸಿರೆಳೆದಿರುವುದಾಗಿ ಕೆಎಂಸಿ ಆಸ್ಪತ್ರೆಯ ವೈದ್ಯರು ಘೋಷಿಸಿದ್ದಾರೆ.

ಸೋಮವಾರ ಶಿರೂರು ಮೂಲ ಮಠದಲ್ಲಿ ನಡೆದ ಕಾರ್ಯಕ್ರಮದ ಬಳಿಕ ಸ್ವಾಮೀಜಿಗೆ ಹೊಟ್ಟೆನೋವು ಕಾಣಿಸಿಕೊಂಡಿದ್ದು, ವಿಪರೀತ ವಾಂತಿ ಮಾಡಿದರೆನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಬುಧವಾರ ಬೆಳಗ್ಗೆ ಆಸ್ಪತ್ರೆಗೆ ದಾಖಲಿಸಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.

Exit mobile version